ದೇಶ

ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ

Manjula VN

ನವದೆಹಲಿ: ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಇತ್ತೀಚಿನ ದೊಡ್ಡ ಬೆಳವಣಿಗೆಯೊಂದರಲ್ಲಿ, ಗಾಯಕನ ಹತ್ಯೆಯ ಮಾಸ್ಟರ್‌ಮೈಂಡ್ ಎಂದು ವರದಿಯಾಗಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್'ನನ್ನು ಕ್ಯಾಲಿಫೋರ್ನಿಯಾದಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಸಿಧು ಮೂಸೆವಾಲಾರನ್ನು ಹತ್ಯೆ ಮಾಡಲಾಗಿತ್ತು. ಈ ಹತ್ಯೆಯ ಹೊಣೆಯ್ನು ಕೆನಡಾ ಮೂಲದ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಹೊತ್ತುಕೊಂಡಿದ್ದ.

ಗಾಯಕ ಸಾವನ್ನಪ್ಪಿದ ಸುದ್ದಿ ಹೊರಬೀಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಗಿದ್ದ ಗೋಲ್ಡಿ ಬ್ರಾರ್, ಹತ್ಯೆಯ ಹೊಣೆ ಹೊತ್ತುಕೊಂಡಿದ್ದ. ಸೇಡಿಗಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದ.

ಗೋಲ್ಡಿ ಬ್ರಾರ್ ಅವರನ್ನು ಕ್ಯಾಲಿಫೋರ್ನಿಯಾದಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಭಾರತದ ಗುಪ್ತಚರ ಮೂಲಗಳು ದೃಢಪಡಿಸಿವೆ,

ಆತನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯು ಯಾವಾಗ ಬೇಕಾದರೂ ಆರಂಭವಾಗಬಹುದು. ಬ್ರಾರ್'ನನ್ನು ಮೊದಲು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು, ನಂತರ ಹಸ್ತಾಂತರ ಪ್ರಕ್ರಿಯೆ ಪ್ರಾರಂಭವಾಗುವ ನಿರೀಕ್ಷೆಯಿದೆ.

ಈ ನಡುವೆ ಬ್ರಾರ್'ನನ್ನು ಬಂಧಿಸಿರುವ ಬಗ್ಗೆ ಕ್ಯಾಲಿಫೋರ್ನಿಯಾ ಪೊಲೀಸರು ಇನ್ನೂ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಇಂಟರ್‌ಪೋಲ್ ಈ ವರ್ಷದ ಆರಂಭದಲ್ಲಿ ಗೋಲ್ಡಿ ಬ್ರಾರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ (ಆರ್‌ಸಿಎನ್) ಜಾರಿ ಮಾಡಿತ್ತು, ಈ ಗ್ಯಾಂಗಸ್ಟರ್ ಎಲ್ಲಿಯೇ ಯಾವುದೇ ದೇಶದಲ್ಲಿ ಪತ್ತೆಯಾದರೂ ಭಾರತಕ್ಕೆ ಹಸ್ತಾಂತರಿಸುವಂತೆ ಒತ್ತಾಯಿಸಿತ್ತು.

SCROLL FOR NEXT