ಪ್ರಯಾಣಿಕ ಸಾವು 
ದೇಶ

ಉತ್ತರ ಪ್ರದೇಶ: ರೈಲಿನ ಕಿಟಕಿಯಿಂದ ತೂರಿಬಂತು ಕಬ್ಬಿಣದ ರಾಡ್, ಪ್ರಯಾಣಿಕ ಸಾವು!

ವ್ಯಕ್ತಿಯೊಬ್ಬರು ದೆಹಲಿ-ಕಾನ್ಪುರ ನೀಲಾಂಚಲ್ ಎಕ್ಸ್‌ಪ್ರೆಸ್(12876) ರೈಲಿನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಪ್ರಯಾಗರಾಜ್ ವಿಭಾಗದ ಸೋಮ್ನಾ ಮತ್ತು ದನ್‌ಬಾರ್ ರೈಲು ನಿಲ್ದಾಣಗಳ ನಡುವೆ ಐದು ಅಡಿ ಉದ್ದ ಮತ್ತು 1.5 ಇಂಚು ದಪ್ಪದ ಕಬ್ಬಿಣದ ರಾಡ್...

ಲಖನೌ: ವ್ಯಕ್ತಿಯೊಬ್ಬರು ದೆಹಲಿ-ಕಾನ್ಪುರ ನೀಲಾಂಚಲ್ ಎಕ್ಸ್‌ಪ್ರೆಸ್(12876) ರೈಲಿನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಪ್ರಯಾಗರಾಜ್ ವಿಭಾಗದ ಸೋಮ್ನಾ ಮತ್ತು ದನ್‌ಬಾರ್ ರೈಲು ನಿಲ್ದಾಣಗಳ ನಡುವೆ ಐದು ಅಡಿ ಉದ್ದ ಮತ್ತು 1.5 ಇಂಚು ದಪ್ಪದ ಕಬ್ಬಿಣದ ರಾಡ್ ಕಿಟಕಿಯ ಗಾಜು ಒಡೆದು ತೂರಿ ಬಂದಿದ್ದು, ರಾಡ್ ಕುತ್ತಿಗೆಗೆ ಚುಚ್ಚಿ ಸಾವನ್ನಪ್ಪಿದ್ದಾರೆ. 

ಶುಕ್ರವಾರ ಬೆಳಗ್ಗೆ 8:45ಕ್ಕೆ ಈ ದಾರುಣ ಘಟನೆ ನಡೆದಿದ್ದು, ರೈಲಿನಲ್ಲಿ ಕಿಟಕಿಯ ಪಕ್ಕದಲ್ಲಿ ಕುಳಿತಿದ್ದ ಸುಲ್ತಾನ್‌ಪುರ ಜಿಲ್ಲೆಯ ಗೋಪಿನಾಥಪುರದ ಹರಿಕೇಶ್ ಕುಮಾರ್ ದುಬೆ ಅವರು ರಾಡು ಚುಚ್ಚಿ ಮೃತಪಟ್ಟಿದ್ದಾರೆ. ದುಬೆ ಅವರ ಮೃತದೇಹವನ್ನು ಅಲಿಗಢ ರೈಲು ನಿಲ್ದಾಣದಲ್ಲಿ ರೈಲಿನಿಂದ ಕೆಳಗಿಳಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ರೈಲ್ವೆ ಅಧಿಕಾರಿಗಳು ಅಲಿಗಢ ರೈಲು ನಿಲ್ದಾಣಕ್ಕೆ ಧಾವಿಸಿದರು.

ಮೂಲಗಳ ಪ್ರಕಾರ, ಘಟನೆ ನಡೆದ ಸ್ಥಳದಲ್ಲಿ ರೈಲ್ವೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಎನ್ನಲಾಗಿದ್ದು, ಈ ವೇಳೆ ಕಿಟಕಿಯಿಂದ ತೂರಿ ಬಂದ ಕಬ್ಬಿಣದ ರಾಡ್ ಪ್ರಯಾಣಿಕನ ಸಾವಿಗೆ ಕಾರಣವಾಗಿದೆ.

ಈ ಮಧ್ಯೆ, ನಿರ್ಮಾಣ ಹಂತದ ರೈಲ್ವೆ ಕಾಮಗಾರಿಯಿಂದ ಈ ಅವಘಢ ನಡೆದಿದೆ ಎಂಬ ಆರೋಪವನ್ನ ರೈಲ್ವೆ ಅಧಿಕಾರಿಗಳು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಹೀಗಾಗಿ ರೈಲ್ವೆ ಪೊಲೀಸ್ ಪಡೆ(ಆರ್‌ಪಿಎಫ್) ಮತ್ತು ಜನರಲ್ ರೈಲ್ವೆ ಪೊಲೀಸ್(ಜಿಆರ್‌ಪಿ)ಸಿಬ್ಬಂದಿಯನ್ನು ಒಳಗೊಂಡ ಜಂಟಿ ತನಿಖೆಗೆ ಆದೇಶಿಸಲಾಗಿದೆ ಎಂದು ಸಿಪಿಆರ್‌ಒ, ಎನ್‌ಸಿಆರ್, ಹಿಮಾಂಶು ಉಪಾಧ್ಯಾಯ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT