ಹೈದ್ರಾಬಾದ್ ವಿಶ್ವವಿದ್ಯಾಲಯ 
ದೇಶ

ವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಹೈದ್ರಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್ ಬಂಧನ

ವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ಆರೋಪದ ಮೇರೆಗೆ ಹೈದ್ರಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಹೈದ್ರಾಬಾದ್: ವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ಆರೋಪದ ಮೇರೆಗೆ ಹೈದ್ರಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ವಿಶ್ವವಿದ್ಯಾಲಯದ ಸಿಬ್ಬಂದಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಲಾಗಿದ್ದು, 62 ವರ್ಷದ ಪ್ರೊಫೆಸರ್ ನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಥೈಲ್ಯಾಂಡ್ ನಿಂದ ಬಂದಿರುವ ಸ್ನಾತಕೋತ್ತರ ವಿದ್ಯಾರ್ಥಿನಿಗೆ ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಮಾತನಾಡಲು ಬಾರದ ಹಿನ್ನೆಲೆಯಲ್ಲಿ ಆಕೆಯ ಹೇಳಿಕೆ ದಾಖಲಿಸಲು ಅನುವಾದಕರ ಸೇವೆಯನ್ನು ಬಯಸಿದ್ದು, ಆಕೆಯ ಹೇಳಿಕೆ ಆಧಾರದ ಮೇಲೆ ಪೊಲೀಸರು ಮುಂದಿನ ತನಿಖೆ ಪ್ರಕ್ರಿಯೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 ಪ್ರೊಫೆಸರ್ ಶುಕ್ರವಾರ ಸಂಜೆ ತನ್ನ ಮನೆಯಲ್ಲಿ ವಿದೇಶಿ ವಿದ್ಯಾರ್ಥಿನಿಗೆ ಕಿಸ್ ಮಾಡಿ ತಬ್ಬಿಕೊಳ್ಳಲು ಪ್ರಯತ್ನಿಸಿದ ಆರೋಪ ಕೇಳಿಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುದ್ಧದಲ್ಲಿ ಭಾಗಿಯಾಗದಂತೆ ಯುರೋಪಿಯನ್ ದೇಶಗಳಿಗೆ ಇರಾನ್ ಎಚ್ಚರಿಕೆ; ಲೆಬನಾನ್ ಮೇಲೆ ಇಸ್ರೇಲ್ ದಾಳಿ

IPL 2026: ಆರ್ ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್! ಅನುಮಾನಕ್ಕೆ ತೆರೆ

ಖಮೇನಿ ಹತ್ಯೆ ಬಗ್ಗೆ ಮೋದಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ; ಭಾರತದ ನಿಲುವು ಸ್ಪಷ್ಟಪಡಿಸುವಂತೆ ಆಗ್ರಹ

ರಾಜ್ಯಸಭಾ ಚುನಾವಣೆಗೆ 9 ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ: ಬಿಹಾರದಿಂದ ನಿತಿನ್ ನಬಿನ್ ಸ್ಪರ್ಧೆ!

ಕೇಂದ್ರ-ರಾಜ್ಯ ಸಂಬಂಧ ಕುರಿತು ರಾಷ್ಟ್ರಮಟ್ಟದ ಚರ್ಚೆ: ತಮಿಳುನಾಡು ಸಿಎಂ ಸ್ಟಾಲಿನ್ ಬೆಂಬಲಿಸಿ ಸಿದ್ದರಾಮಯ್ಯ ಪತ್ರ!

SCROLL FOR NEXT