ದೇಶ

ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್, ಖಾಲಿದ್ ಸೈಫಿ ಖುಲಾಸೆ

Lingaraj Badiger

ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಯುನೈಟೆಡ್ ಅಗೇನ್ಸ್ಟ್ ಹೇಟ್ ಸಂಸ್ಥಾಪಕ ಖಾಲಿದ್ ಸೈಫಿ ಅವರನ್ನು ಕೋರ್ಟ್ ಖುಲಾಸೆಗೊಳಿಸಿದೆ.

2020, ಫೆಬ್ರವರಿ 24 ರಂದು ಮೈನ್ ಕರವಾಲ್ ನಗರ ರಸ್ತೆಯಲ್ಲಿ ಗಲಭೆಯ ಗುಂಪೊಂದು ಕಲ್ಲು ತೂರಾಟ ನಡೆಸಿದೆ ಎಂದು ಕಾನ್‌ಸ್ಟೆಬಲ್ ಸಂಗ್ರಾಮ್ ಸಿಂಗ್ ಅವರು ನೀಡಿದ್ದ ಹೇಳಿಕೆಯ ಆಧಾರದ ಮೇಲೆ ಮರ್ ಖಾಲಿದ್, ಖಾಲಿದ್ ಸೈಫಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ದೆಹಲಿ ಗಲಭೆ ಪ್ರಕರಣದಿಂದ ಉಮರ್ ಖಾಲಿದ್ ಮತ್ತು ಖಾಲಿದ್ ಸೈಫಿ ಅವರನ್ನು ಖುಲಾಸೆಗೊಳಿಸಿದ್ದಾರೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಮಧುಕರ್ ಪಾಂಡೆ ಅವರು ತಿಳಿಸಿದ್ದಾರೆ.

ಉಮರ್ ಖಾಲಿದ್ ಅವರು ಹಲವಾರು ಇತರ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ ಮತ್ತು ಗಲಭೆಗಳ ಹಿಂದಿನ ದೊಡ್ಡ ಪಿತೂರಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಅಡಿಯಲ್ಲಿ ಕೇಸ್ ದಾಖಲಿಸಲಾಗಿದ್ದು, ಈ ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಉಳಿದಿವೆ.

SCROLL FOR NEXT