ದೇಶ

ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ರ‍್ಯಾಲಿ ನಡೆಸುತ್ತಿದ್ದ ಸ್ಥಳದಲ್ಲಿ ಸ್ಫೋಟ, ಇಬ್ಬರು ಸಾವು, ಹಲವರಿಗೆ ಗಾಯ

Ramyashree GN

ಕೊಂಟೈ: ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ಟಿಎಂಸಿ ನಾಯಕ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ರ‍್ಯಾಲಿಯ ಸ್ಥಳದ ಬಳಿ ನಡೆದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಶನಿವಾರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿರುವ ಸ್ಥಳ ಕೊಂಟೈ ಪಟ್ಟಣದಿಂದ 5.1 ಕಿಮೀ ದೂರದಲ್ಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 11.50ರ ಸುಮಾರಿಗೆ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಶನಿವಾರ ಬೆಳಗ್ಗೆ ಎರಡು ಮೃತದೇಹಗಳು ಪತ್ತೆಯಾಗಿವೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ.

ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ. ಆದರೆ, ಸ್ಫೋಟದ ಪರಿಣಾಮವು ಎಷ್ಟು ತೀವ್ರವಾಗಿದೆಯೆಂದರೆ, ಘಟನೆಯಲ್ಲಿ ಹುಲ್ಲು ಮತ್ತು ಮಣ್ಣಿನ ಮನೆಯ ಛಾವಣಿ ಹಾರಿಹೋಗಿದೆ ಎಂದು ಕೊಂಟೈನ್ ಉಪವಿಭಾಗದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಫೋರೆನ್ಸಿಕ್ ತಂಡವು ಮಾದರಿಗಳನ್ನು ಸಂಗ್ರಹಿಸಲು ಸ್ಥಳಕ್ಕೆ ತಲುಪಿದೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಘಟನೆಗೆ ಟಿಎಂಸಿಯನ್ನು ಹೊಣೆ ಮಾಡಿದ್ದು, ರಾಜ್ಯದಲ್ಲಿ ಬಾಂಬ್ ತಯಾರಿಕೆ ಉದ್ಯಮ ಮಾತ್ರ ಅಭಿವೃದ್ಧಿ ಹೊಂದುತ್ತಿದೆ ಎಂದು ಹೇಳಿದರು.

ಇಂತಹ ಘಟನೆಗಳ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಏಕೆ ಮೌನವಾಗಿದ್ದಾರೆ. ಈ ಬಗ್ಗೆ ಅವರು ಹೇಳಿಕೆ ನೀಡಬೇಕು ಎಂದು ಸಿಪಿಐ (ಎಂ) ಹಿರಿಯ ನಾಯಕ ಸುಜನ್ ಚಕ್ರವರ್ತಿ ಒತ್ತಾಯಿಸಿದ್ದಾರೆ.

ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ಯಾವುದೇ ಪುರಾವೆಗಳಿಲ್ಲದೆ ಆಡಳಿತ ಪಕ್ಷವನ್ನು ದೂಷಿಸುವುದು ವಿರೋಧ ಪಕ್ಷಗಳಿಗೆ ತುಂಬಾ ಸುಲಭ.

SCROLL FOR NEXT