ದೇಶ

ಎಂಸಿಡಿ ಚುನಾವಣೆ: ದೆಹಲಿ ಜನರಿಗಾಗಿ ಕೆಲಸ ಮಾಡುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ; ಮನೀಶ್ ಸಿಸೋಡಿಯಾ

Manjula VN

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣಾ ಮತದಾನ ಪ್ರಗತಿಯಲ್ಲಿದ್ದು, ಈ ನಡುವಲ್ಲೇ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಜನತೆಗಾಗಿ ಬಿಜೆಪಿ ಕಳೆದ 15 ವರ್ಷಗಳಿಂದ ಏನನ್ನೂ ಮಾಡಿಲ್ಲ. ಜನರಿಗಾಗಿ ಕೆಲಸ ಮಾಡುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದ್ದಾರೆ.

"1.5 ಕೋಟಿ ಜನರು ಇಂದು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ. ದೆಹಲಿಯನ್ನು ಸ್ವಚ್ಛವಾಗಿಡುವುದು, ನೈರ್ಮಲ್ಯ ಸಮಸ್ಯೆಗಳು, ಭೂಕುಸಿತ, ಭ್ರಷ್ಟಾಚಾರ, ಪಾರ್ಕಿಂಗ್ ಅವ್ಯವಸ್ಥೆ, ಶಾಲೆಗಳು ಮತ್ತು ಆಸ್ಪತ್ರೆಗಳನ್ನು ನಿರ್ಮಿಸುವುದು ನಮ್ಮ ಆದ್ಯತೆಯಾಗಿದೆ ಎಂಬುದನ್ನು ನೆನಪಿನಲ್ಲಿಡಿ ಎಂದು ನಾನು ಜನರಿಗೆ ಮನವಿ ಮಾಡುತ್ತೇನೆ. ಮತದಾನ ಮಾಡುವ ಮುನ್ನ ಜನರು ಆಲೋಚನೆ ಮಾಡಬೇಕು. ದೆಹಲಿಯನ್ನು ಸ್ವಚ್ಛವಾಗಿಡಲು ಮತ ಚಲಾಯಿಸಿ. ಕಸ ಮುಕ್ತ ದೆಹಲಿಗಾಗಿ ಮತ ಚಲಾಯಿಸಿ ಎಂದು ಹೇಳಿದ್ದಾರೆ.

15 ವರ್ಷಗಳಿಂದ ಬಿಜೆಪಿ ದೆಹಲಿಗೆ ಏನನ್ನೂ ಮಾಡಿಲ್ಲ, ಜನರಿಗಾಗಿ ಕೆಲಸ ಮಾಡುವಲ್ಲಿ ವಿಫಲವಾಗಿದೆ, ಜನರ ಪ್ರಶ್ನೆಗಳಿಗೆ ಉತ್ತರಿಸಲು ಬಿಜೆಪಿ ಬಳಿ ಏನೂ ಇಲ್ಲ, ಆದ್ದರಿಂದ ಅವರು ನಕಾರಾತ್ಮಕ ಪ್ರಚಾರವನ್ನು ಪ್ರಾರಂಭಿಸಿದರು ಎಂದು ತಿಳಿಸಿದ್ದಾರೆ.

SCROLL FOR NEXT