ಸಾಂದರ್ಭಿಕ ಚಿತ್ರ 
ದೇಶ

ಬಸ್‌ಗಾಗಿ ಕಾಯುತ್ತಿದ್ದ ಜನರ ಮೇಲೆ ಹರಿದ ಟ್ರಕ್; 6 ಮಂದಿ ದಾರುಣ ಸಾವು, 8 ಜನರಿಗೆ ಗಂಭೀರ ಗಾಯ

ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ರಸ್ತೆಬದಿಯ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರತ್ಲಾಂ: ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ರಸ್ತೆಬದಿಯ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಎಂಟು ಮಂದಿಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಕ್ರ ಸ್ಫೋಟಗೊಂಡ ಬೆನ್ನಲ್ಲೇ ಟ್ರಕ್  ನಿಯಂತ್ರಣವನ್ನು ಚಾಲಕ ಕಳೆದುಕೊಂಡಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.ರತ್ಲಾಂ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ. ದೂರದಲ್ಲಿ ಸಾತ್ರುಂಡಾ ಗ್ರಾಮದ ರತ್ಲಾಂ-ಲೆಬಾದ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ.

ಟ್ರಕ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಭಿಷೇಕ್ ತಿವಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!