ಪಿಎಂ ನರೇಂದ್ರ ಮೋದಿ(ಸಂಗ್ರಹ ಚಿತ್ರ) 
ದೇಶ

ಜನವರಿಯಲ್ಲಿ ಮುಖ್ಯ ಕಾರ್ಯದರ್ಶಿಗಳ 2ನೇ ರಾಷ್ಟ್ರೀಯ ಸಮಾವೇಶ; ಪ್ರಧಾನಿ ಮೋದಿ ಅಧ್ಯಕ್ಷತೆ

2023-24ರ ಕೇಂದ್ರ ಬಜೆಟ್‌ಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳ 'ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮಾವೇಶ'ದ ಅಧ್ಯಕ್ಷತೆ...

ನವದೆಹಲಿ: 2023-24ರ ಕೇಂದ್ರ ಬಜೆಟ್‌ಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳ 'ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮಾವೇಶ'ದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.

'ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮಾವೇಶ' ಜನವರಿಯಲ್ಲಿ ದೆಹಲಿಯಲ್ಲಿ ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಯುವ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2023 ರಂದು ಸಂಸತ್ತಿನಲ್ಲಿ 2023-24ನೇ ಸಾಲಿನ ಬಜೆಟ್ ಅನ್ನು ಮಂಡಿಸಲಿದ್ದಾರೆ.

ಈ ಹಿಂದೆ ನರೇಂದ್ರ ಮೋದಿ ಅವರು 2022ರ ಜೂನ್ 16 ಮತ್ತು 17ರಂದು ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಮುಖ್ಯ ಕಾರ್ಯದರ್ಶಿಗಳ ಪ್ರಥಮ ರಾಷ್ಟ್ರೀಯ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ

ಮುಂಬೈ: ಬಾಲಿವುಡ್ ನಟಿಯ ಮೇಲೆ ಅತ್ಯಾಚಾರ ಆರೋಪ; 73 ವರ್ಷದ ಖ್ಯಾತ ಸಿನಿಮಾ ಡೈರೆಕ್ಟರ್ ಬಂಧನ!