ಗುಜರಾತ್ ಚುನಾವಣೆ 
ದೇಶ

ಗುಜರಾತ್​ ವಿಧಾನಸಭೆ ಚುನಾವಣೆ: 2ನೇ ಹಂತದ ಮತದಾನ ಆರಂಭ, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮನವಿ

ತೀವ್ರ ಕುತೂಹಲ ಮೂಡಿಸಿರುವ ಗುಜರಾತ್​ ರಾಜ್ಯ ವಿಧಾನಸಭೆ ಚುನಾವಣೆಯ 2ನೇ ಮತ್ತು ಕೊನೆಯ ಹಂತದ ಮತದಾನ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನವಿ ಮಾಡಿದ್ದಾರೆ.

ಅಹಮದಾಬಾದ್​ (ಗುಜರಾತ್​): ತೀವ್ರ ಕುತೂಹಲ ಮೂಡಿಸಿರುವ ಗುಜರಾತ್​ ರಾಜ್ಯ ವಿಧಾನಸಭೆ ಚುನಾವಣೆಯ 2ನೇ ಮತ್ತು ಕೊನೆಯ ಹಂತದ ಮತದಾನ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನವಿ ಮಾಡಿದ್ದಾರೆ.

2 ಹಂತದ ಮತದಾನದಲ್ಲಿ 14 ಜಿಲ್ಲೆಗಳ 93 ಕ್ಷೇತ್ರಗಳಿಗೆ ಮತದಾನ ಆರಂಭಗೊಂಡಿದೆ. ಇಂದು ನಡೆಯುವ ಮತದಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಕೂಡ ತಮ್ಮ ಹಕ್ಕು ಚಲಾಯಿಸಲಿದ್ದಾರೆ.

89 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ನಡೆದ ಚುನಾವಣೆಯಲ್ಲಿ ಶೇ.60 ರಷ್ಟು ಮಾತ್ರ ಮತದಾನವಾಗಿತ್ತು. ಇದು ಕಳೆದ ಚುನಾವಣೆಗಿಂತಲೂ ಕಡಿಮೆ ಪ್ರಮಾಣವಾಗಿತ್ತು. ಇಂದಿನ ಚುನಾವಣೆಯಲ್ಲಿ ಮತದಾರರು ಎಷ್ಟರಮಟ್ಟಿಗೆ ಪಾಲ್ಗೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಮೊದಲ ಹಂತದ ಮತದಾನದಂದು ಪ್ರಧಾನಿ ಮೋದಿ ಅವರು 2ನೇ ಹಂತದ ಮತಕ್ಷೇತ್ರಗಳಲ್ಲಿ 54 ಕಿಲೋ ಮೀಟರ್ ಉದ್ದದ ಭರ್ಜರಿ ರೋಡ್​ ಶೋ ನಡೆಸಿ ಸಂಚಲನ ಉಂಟು ಮಾಡಿದ್ದರು. ಇಷ್ಟು ಉದ್ದಕ್ಕೂ ರಸ್ತೆಗಳ ಇಕ್ಕೆಲಗಳಲ್ಲಿ 9 ಲಕ್ಷಕ್ಕೂ ಅಧಿಕ ಜನರು ಸೇರಿದ್ದು ದಾಖಲೆಯಾಗಿತ್ತು. ಇದು ಚುನಾವಣೆಯ ಮೇಲೆ ಪ್ರಭಾವ ಬೀರಲಿದೆ ಎಂದೇ ಅಂದಾಜಿಸಲಾಗಿದೆ.

93 ಸೀಟುಗಳಲ್ಲಿ ಬಿಜೆಪಿ, ಕಾಂಗ್ರೆಸ್​, ಆಪ್​ ಸೇರಿದಂತೆ 61 ಪಕ್ಷಗಳ 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರಲ್ಲಿ 285 ಸ್ವತಂತ್ರ ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ. ಕಳೆದ ಸಲ ಇಷ್ಟು ಕ್ಷೇತ್ರಗಳಲ್ಲಿ 51 ಸ್ಥಾನಗಳನ್ನು ಬಿಜೆಪಿ, 39 ಕಾಂಗ್ರೆಸ್​, 3 ಕ್ಷೇತ್ರಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.

ಇಂದಿನ ಮತದಾನದಲ್ಲಿ ಪ್ರಧಾನಿ ಮೋದಿ ಅವರು ಅಹಮದಾಬಾದ್​ನ ಸಾಬರಮತಿ ಕ್ಷೇತ್ರದ ರಾಣಿಪ್​ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ. ಗೃಹ ಸಚಿವ ಅಮಿತ್​ ಶಾ ಅವರೂ ಮತದಾನದಲ್ಲಿ ಭಾಗಿಯಾಗಲಿದ್ದು, ನಾರನ್​ಪುರ ಬೂತ್​ನಲ್ಲಿ ಅವರು ಮತದಾನ ಮಾಡಲಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮನವಿ
2ನೇ ಹಂತದ ಮತದಾನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಜನತೆ ಬಳಿ ಮನವಿ ಮಾಡಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಗುಜರಾತ್ ಚುನಾವಣೆಯ 2 ನೇ ಹಂತದಲ್ಲಿ ಮತ ಚಲಾಯಿಸುತ್ತಿರುವ ಎಲ್ಲರಿಗೂ, ವಿಶೇಷವಾಗಿ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದೇನೆ. ನಾನು ಕೂಡ ಸುಮಾರು 9 ಗಂಟೆಗೆ ಅಹಮದಾಬಾದ್‌ನಲ್ಲಿ ನನ್ನ ಮತ ಹಕ್ಕನ್ನು ಚಲಾಯಿಸುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT