ಕೋಲ್ಕತ್ತಾ ಸಮೀಪದ ನ್ಯೂ ಟೌನ್‌ನಲ್ಲಿ ಭಾರಿ ಬೆಂಕಿ ಅವಘಡ 
ದೇಶ

ಕೋಲ್ಕತ್ತಾ: ನ್ಯೂ ಟೌನ್‌ನಲ್ಲಿ ಭಾರಿ ಬೆಂಕಿ ಅವಘಡ; ರಸ್ತೆ ಬದಿಯ 20 ಅಂಗಡಿಗಳು ಸುಟ್ಟು ಕರಕಲು

ಮಂಗಳವಾರ ಬೆಳಗ್ಗೆ ಕೋಲ್ಕತ್ತಾ ಸಮೀಪದ ನ್ಯೂ ಟೌನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ರಸ್ತೆ ಬದಿಯಲ್ಲಿದ್ದ 20 ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋಲ್ಕತ್ತಾ: ಮಂಗಳವಾರ ಬೆಳಗ್ಗೆ ಕೋಲ್ಕತ್ತಾ ಸಮೀಪದ ನ್ಯೂ ಟೌನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ರಸ್ತೆ ಬದಿಯಲ್ಲಿದ್ದ 20 ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೌರಂಗಾನಗರದ ಧಲೈ ಸೇತುವೆ ಬಳಿಯ ಬಾಗ್ಜೋಳ ಕಾಲುವೆಯ ಉದ್ದಕ್ಕೂ ಇರುವ ಅಂಗಡಿಗಳ ಪೈಕಿ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿರುವುದನ್ನು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಸ್ಥಳೀಯರು ಗಮನಿಸಿದ್ದಾರೆ ಎಂದು ಅವರು ಹೇಳಿದರು.

ನೋಡ ನೋಡುತ್ತಲೇ ಬೆಂಕಿಯು ಇತರೆ ಅಂಗಡಿಗಳಿಗೂ ಆವರಿಸಿದೆ. ಘಟನೆಯಿಂದಾಗಿ ಅಕ್ಕಪಕ್ಕದ ಕನಿಷ್ಠ 20 ಅಂಗಡಿಗಳು ಸುಟ್ಟುಹೋಗಿವೆ ಎಂದು ಅವರು ಹೇಳಿದರು.

ಬಳಿಕ ಸ್ಥಳಕ್ಕೆ ಆಗಮಿಸಿದ ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ಹತೋಟಿಗೆ ತಂದವು. ಬೆಂಕಿ ಹೊತ್ತುಕೊಂಡಿರುವ ಕಾರಣ ಏನೆಂದು ತನಿಖೆ ನಡೆಸಲಾಗುತ್ತಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!