ಸಾಂದರ್ಭಿಕ ಚಿತ್ರ 
ದೇಶ

ತುಂಡು ಭೂಮಿಗಾಗಿ ಸೋದರ ಸಂಬಂಧಿಯ ರುಂಡ ಕಡಿದು, ಸೆಲ್ಫಿ ತೆಗೆದ ಆರೋಪಿಗಳು!

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ  24 ವರ್ಷದ ಸೋದರ ಸಂಬಂಧಿಯ ರುಂಡವನ್ನು 20 ವರ್ಷದ ಬುಡುಕಟ್ಟು ವ್ಯಕ್ತಿ ಹಾಗೂ ಆತನ ಸ್ನೇಹಿತರು ಕತ್ತರಿಸಿರುವ ಘಟನೆ ಜಾರ್ಖಂಡ್ ಜಿಲ್ಲೆಯ ಕುಂತಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸ್ನೇಹಿತ ಆ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕುಂತಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ  24 ವರ್ಷದ ಸೋದರ ಸಂಬಂಧಿಯ ರುಂಡವನ್ನು 20 ವರ್ಷದ ಬುಡುಕಟ್ಟು ವ್ಯಕ್ತಿ ಹಾಗೂ ಆತನ ಸ್ನೇಹಿತರು ಕತ್ತರಿಸಿರುವ ಘಟನೆ ಜಾರ್ಖಂಡ್ ಜಿಲ್ಲೆಯ ಕುಂತಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸ್ನೇಹಿತ ಆ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮುರ್ಹು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಡಿಸೆಂಬರ್ 2 ರಂದು ಮೃತನ ತಂದೆ ಎಫ್ ಐಆರ್ ದಾಖಲಿಸಿದ ನಂತರ ಪ್ರಮುಖ ಆರೋಪಿ, ಆತನ ಹೆಂಡತಿ ಸೇರಿದಂತೆ ಆರು ಮಂದಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ತನ್ನ ಮಗ ಕಾನು ಮುಂಡಾ ಡಿಸೆಂಬರ್ ಮನೆಯಲ್ಲಿ ಒಬ್ಬನೇ ಇದ್ದಾಗ ಆತನ ಸೋದರ ಸಂಬಂಧಿ ಸಾಗರ್ ಮುಂಡಾ ಹಾಗೂ ಆತನ ಸ್ನೇಹಿತರು ಅಪಹರಿಸಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾಗಿ ಕೊಲೆಯಾದ ವ್ಯಕ್ತಿಯ ತಂದೆ ಎಫ್ ಐಆರ್ ನಲ್ಲಿ ಹೇಳಿದ್ದಾರೆ. ಕಾನು ಪತ್ತೆಯಾಗದಿದ್ದಾಗ ಅವರ ತಂದೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ಕುಂತಿ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಅಮಿತ್ ಕುಮಾರ್ ನೇತೃತ್ವದಲ್ಲಿ ಆರೋಪಿಗಳ ಪತ್ತೆಗಾಗಿ ತಂಡವೊಂದನ್ನು ರಚಿಸಲಾಗಿತ್ತು.

ಆರೋಪಿಗಳ ಬಂಧನ ನಂತರ ಕುಮಾಂಗ್ ಗೊಪ್ಲಾ ಅರಣ್ಯ ಪ್ರದೇಶದಲ್ಲಿ ಮೃತದೇಹ ಪತ್ತೆಯಾದರೆ, ಅಲ್ಲಿಂದ 15 ಕಿ.ಮೀ ದೂರದಲ್ಲಿರುವ ದುಲ್ವಾ ತುಂಗ್ರಿ ಅರಣ್ಯದಲ್ಲಿ ರುಂಡ ಪತ್ತೆಯಾಗಿದೆ ಎಂದು ಮುರ್ಹು ಪೊಲೀಸ್ ಠಾಣಾಧಿಕಾರಿ ಚುಂಡಮಣಿ ತುಡು ಹೇಳಿದ್ದಾರೆ.

ಆರೋಪಿಗಳು ಕಡಿದ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡು ವಿಕೃತಿ ಮೆರೆದಿದ್ದಾರೆ. ಆರೋಪಿಗಳಿಂದ ಐದು ಮೊಬೈಲ್ ಫೋನ್ ಗಳು, ಮಾರಕಾಸ್ತ್ರಗಳು, ಕೊಡಲಿ ಮತ್ತು ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.  ತುಂಡು ಭೂಮಿಗಾಗಿ ಆರೋಪಿಗಳು ಮತ್ತು ಕೊಲೆಯಾದ ಯುವಕರ ಕುಟುಂಬದ ಮಧ್ಯೆ ದ್ವೇಷವಿತ್ತು. ಇದೇ ಕಾರಣದಿಂದ ಆತನ ತಲೆ ಕಡಿಯಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT