ಸರ್ವಪಕ್ಷ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರರ ಚಿತ್ರ 
ದೇಶ

ಚಳಿಗಾಲದ ಸಂಸತ್ ಅಧಿವೇಶನ: ನಿರುದ್ಯೋಗ, ಬೆಲೆ ಏರಿಕೆ ಕುರಿತು ಚರ್ಚಿಸಲು ಸರ್ವಪಕ್ಷ ಸಭೆಯಲ್ಲಿ ವಿಪಕ್ಷಗಳ ಆಗ್ರಹ

ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಹಾಗೂ ಲೋಕಸಭೆಯ ಉಪ ನಾಯಕ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಿತು.

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಹಾಗೂ ಲೋಕಸಭೆಯ ಉಪ ನಾಯಕ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಿತು.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವ ಮುರುಳೀಧರನ್ ಮತ್ತು ಅರ್ಜುನ್ ರಾಮ್ ಮೇಘಾವಾಲ್, ಪಿಯೂಸ್ ಗೋಯೆಲ್ ಸರ್ಕಾರದ ಪರವಾಗಿ ಸಭೆಯಲ್ಲಿ ಪಾಲ್ಗೊಂಡರು. ಕಾಂಗ್ರೆಸ್ ಪಕ್ಷದಿಂದ ಅಧೀರ್ ರಂಜನ್ ಚೌಧರಿ, ಟಿಎಂಸಿಯಿಂದ ಸುದೀಪ್ ಬಂಡೋಪಾಧ್ಯಾಯ, ಡೆರಿಕ್ ಓ ಬ್ರಿಯಾನ್, ಡಿಎಂಕೆಯಿಂದ ಟಿಆರ್ ಬಾಲು, ಎನ್ ಸಿಪಿಯ ಡಾ. ಫಾರೂಖ್ ಅಬ್ದುಲ್ಲಾ ಮತ್ತಿತರ ಪಕ್ಷಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ನಿರುದ್ಯೋಗ, ಬೆಲೆ ಏರಿಕೆ, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಶೇ. 10 ರಷ್ಟು ಮೀಸಲಾತಿ ಮತ್ತಿತರ ವಿಚಾರ ಕುರಿತು ಅಧಿವೇಶನದಲ್ಲಿ ಚರ್ಚೆಯಾಗಬೇಕು ಎಂದು ಕಾಂಗ್ರೆಸ್ ಮತ್ತು ಟಿಎಂಸಿ ಮುಖಂಡರು ಒತ್ತಾಯಿಸಿದರು. ಸರ್ಕಾರದಿಂದ ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ, ಬೆಲೆ ಏರಿಕೆ ಕುರಿತು ಕಾಂಗ್ರೆಸ್ ಪ್ರಸ್ತಾಪಿಸಿತು.  

ನಿಯಮಗಳ ಪ್ರಕಾರ, ಎಲ್ಲಾ ವಿಚಾರಗಳ ಕುರಿತು ಚರ್ತಿಸಲು ಸರ್ಕಾರ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 7 ರಿಂದ ಆರಂಭವಾಗಲಿದ್ದು, ಡಿಸೆಂಬರ್ 29ರವರೆಗೂ ಮುಂದುವರೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!