ಸಂಸತ್ತು 
ದೇಶ

ಡಿಸೆಂಬರ್ 7 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: 16 ಮಸೂದೆ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ

ಸಂಸತ್‌ನ ಚಳಿಗಾಲದ ಅಧಿವೇಶನ ಇದೇ 7ರಿಂದ ಆರಂಭವಾಗಲಿದ್ದು, 16 ಹೊಸ ಮಸೂದೆಗಳನ್ನು ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ

ನವದೆಹಲಿ: ಸಂಸತ್‌ನ ಚಳಿಗಾಲದ ಅಧಿವೇಶನ ಇದೇ 7ರಿಂದ ಆರಂಭವಾಗಲಿದ್ದು, 16 ಹೊಸ ಮಸೂದೆಗಳನ್ನು ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ. ಈ ಬಾರಿ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಒಟ್ಟು 16 ಹೊಸ ಮಸೂದೆಗಳು, ಟ್ರೇಡ್ ಮಾರ್ಕ್ (ತಿದ್ದುಪಡಿ) ಮಸೂದೆ, 2022, ಮತ್ತು ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ, 2022 ಅನ್ನು ಮಂಡಿಸಲಾಗುತ್ತದೆ.

ಕೆಲವು ಮಸೂದೆಗಳನ್ನು ಈಗಾಗಲೇ ಸದನಗಳಲ್ಲಿ ಅಂಗೀಕರಿಸಲಾಗಿದೆ ಅಥವಾ ಸಂಸದೀಯ ಸಮಿತಿಗಳು ಪರಿಶೀಲಿಸಿವೆ. ಚಳಿಗಾಲದ ಅಧಿವೇಶನವು ಡಿಸೆಂಬರ್ 29, 2022ರವರೆಗೆ ಇರಲಿದ್ದು, ಒಟ್ಟು 17 ಕೆಲಸದ ದಿನಗಳು ಇರುತ್ತವೆ.

ಇದರ ಮಧ್ಯೆ ದತ್ತಾಂಶ ಸಂರಕ್ಷಣಾ ಮಸೂದೆ ಮತ್ತು ಬ್ಯಾಂಕಿಂಗ್ ಕಾಯಿದೆ, ದಿವಾಳಿತನ ಕಾನೂನು ಮತ್ತು ಸ್ಪರ್ಧಾತ್ಮಕ ಆಯೋಗದ ಕಾಯಿದೆಗೆ ತಿದ್ದುಪಡಿ ಮಾಡುವ ಮಸೂದೆಗಳನ್ನು ಶಾಸಕಾಂಗ ವ್ಯವಹಾರ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಸಂಸತ್ ಚಳಿಗಾಲ ಅಧಿವೇಶನದಲ್ಲಿ ಮಂಡನೆ ಆಗಲಿರುವ 16 ಮಸೂದೆಗಳು ಯಾವುವು ಹಾಗೂ ಚಳಿಗಾಲ ಅಧಿವೇಶನದ ಕುರಿತು ಪ್ರಮುಖ ಬೆಳವಣಿಗೆಗಳನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಬಹುದಾದ ಶಾಸಕಾಂಗ ಕಾರ್ಯಸೂಚಿ ಮತ್ತು ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ನರೇಂದ್ರ ಮೋದಿ ಸರ್ಕಾರ ಮಂಗಳವಾರ ನಾಯಕರ ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಇತ್ತೀಚೆಗೆ ಸರ್ವಪಕ್ಷ ಸಭೆಗೆ ಹಾಜರಾಗುವಂತೆ ವಿವಿಧ ಪಕ್ಷಗಳ ನಾಯಕರಿಗೆ ಆಹ್ವಾನಿಸಿದ್ದರು. ಸಂಸತ್‌ನ ಚಳಿಗಾಲದ ಅಧಿವೇಶನಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗೈರಾಗುವ ಸಾಧ್ಯತೆ ಇದೆ. ಸರ್ಕಾರ ಚರ್ಚೆಗೆ ಸಿದ್ಧವಾದರೆ, ಪಕ್ಷವು ಅದಕ್ಕೆ ರಚನಾತ್ಮಕ ಬೆಂಬಲವನ್ನು ನೀಡುತ್ತದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಇದಕ್ಕೆ ಪ್ರತ್ಯೇಕವಾಗಿ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ಸಂಜೆ ಅಧಿವೇಶನಕ್ಕೆ ಮುಂಚಿತವಾಗಿ ವ್ಯವಹಾರ ಸಲಹಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಬಾರಿ ಅವರು ಅಧಿವೇಶನದ ಮುನ್ನಾದಿನದಂದು ವಾಡಿಕೆಯಂತೆ ಸರ್ವಪಕ್ಷ ಸಭೆಯ ಬದಲಿಗೆ ಬಿಎಸಿ ಸಭೆಯನ್ನು ಕರೆಯಲು ನಿರ್ಧರಿಸಿದ್ದಾರೆ. ಬಿಎಸಿ ಸದನದ ಶಾಸಕಾಂಗ ಕಾರ್ಯಸೂಚಿಯನ್ನು ಚರ್ಚಿಸುತ್ತದೆ. ಯಾವ ಪಕ್ಷಗಳು ಚರ್ಚೆಯನ್ನು ನಡೆಸಲು ಬಯಸುತ್ತವೆ ಎಂಬುದರ ಕುರಿತು ಚರ್ಚಿಸುತ್ತದೆ.

ಕಳೆದ 22 ತಿಂಗಳುಗಳಿಂದ ಭಾರತ ಮತ್ತು ಚೀನಾ ನಡುವೆ ಗಡಿ ಸಂಘರ್ಷ ನಡೆಯುತ್ತಿದ್ದು ಈ ವಿಷಯದ ಬಗ್ಗೆ ಸಂಸತ್ತಿನಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಈ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಬೇಕೆಂದು ಕಾಂಗ್ರೆಸ್ ಬಯಸುತ್ತಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT