ದೇಶ

ತಾಯಿಯಾಗುವ ಆಯ್ಕೆಯಲ್ಲಿ ಮಹಿಳೆ ನಿರ್ಧಾರವೇ ಅಂತಿಮ: 33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ದೆಹಲಿ ಹೈಕೋರ್ಟ್ ಅಸ್ತು

Shilpa D

ನವದೆಹಲಿ: ಭಾರತದ ಕಾನೂನು ಗರ್ಭಪಾತದ ಹಕ್ಕನ್ನು ಮಹಿಳೆಯರಿಗೆ ನೀಡುತ್ತದೆ. ಮಗುವಿಗೆ ಜನ್ಮ ನೀಡುವುದು, ಇನ್ನೂ ಜನ್ಮ ತಾಳದ ಮಗುವಿನ ಘನತೆಯ ಬದುಕಿನ ಸಾಧ್ಯತೆಯ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಹಕ್ಕು ತಾಯಿಯದ್ದೇ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾ. ಪ್ರತಿಭಾ ಎಂ. ಸಿಂಗ್  ತಾಯಿಯ ಆಯ್ಕೆಯೇ ಅಂತಿಮವಾಗಿದ್ದು, ಅದರ ಆಧಾರದ ಮೇಲೆ ಅನುಮತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ನ್ಯಾಯಮೂರ್ತಿಗಳು ಎನ್‌ಎನ್‌ಜೆಪಿ ಆಸ್ಪತ್ರೆ ವೈದ್ಯರ ಸಲಹೆ ಕೇಳಿದ್ದರು. ಆದರೆ ವರದಿಯಲ್ಲಿ ವೈದ್ಯರು ಗರ್ಭಪಾತವನ್ನು ತಿರಸ್ಕರಿಸಿದ್ದರು.

ಬಳಿಕ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಮತ್ತು ಸ್ತ್ರೀರೋಗತಜ್ಞರಿಂದ ವರದಿ ಕೇಳಿದರು. ನರಶಸ್ತ್ರಚಿಕಿತ್ಸಕರು ಮಗುವಿಗೆ ಏನಾದರೂ ನ್ಯೂನತೆ ಇರುವ ಸಾಧ್ಯತೆಯಿದೆ, ಮಗುವಿನ `ಜೀವನದ ಗುಣಮಟ್ಟ’ವನ್ನು ಊಹಿಸಲು ಸಾಧ್ಯವಿಲ್ಲ ಎಂದು ವರದಿ ನೀಡಿದ್ದರು. ಆದರೆ ಮಗುವಿನ ಜನನದ ಬಳಿಕ ಸುಮಾರು 10 ವಾರಗಳ ನಂತರ ಕೆಲವು ಸಮಸ್ಯೆಗಳಿಗೆ ಶಸ್ತ್ರಚಿಕಿತ್ಸೆ ನಡೆಸಬಹುದು ಎಂದು ತಿಳಿಸಿದ್ದರು

26 ವರ್ಷದ ವಿವಾಹಿತ ಮಹಿಳೆಗೆ ಗರ್ಭಪಾತಕ್ಕೆ ಅವಕಾಶ ನೀಡುವ ಸಂದರ್ಭದಲ್ಲಿ ಗರ್ಭಪಾತಕ್ಕೆ ಮಹಿಳೆಯ ಆಯ್ಕೆ ಮತ್ತು ಹುಟ್ಟಲಿರುವ ಮಗುವಿನ ಘನತೆಯ ಜೀವನದ ಸಾಧ್ಯತೆಯನ್ನು ಗುರುತಿಸುವುದು ಗರ್ಭಪಾತದ ವಿಷಯಗಳಲ್ಲಿ “ಅಂತಿಮ ನಿರ್ಧಾರ” ಎಂದು ದೆಹಲಿ ಹೈಕೋರ್ಟ್ ತಿಳಿಸಿದೆ.

ಗರ್ಭಿಣಿ ಮಹಿಳೆ ತನ್ನ ಗರ್ಭವನ್ನು ಅಂತ್ಯಗೊಳಿಸುವ ಹಕ್ಕು ಪ್ರಪಂಚದಾದ್ಯಂತ ಚರ್ಚೆಯ ವಿಷಯವಾಗಿದ್ದರೂ, ಭಾರತವು ತನ್ನ ಕಾನೂನಿನಲ್ಲಿ ಮಹಿಳೆಯ ಆಯ್ಕೆಯನ್ನು ಗುರುತಿಸುತ್ತದೆ ಎಂದು ನ್ಯಾಯಮೂರ್ತಿ ಪ್ರತಿಭಾ ಎಂ. ಸಿಂಗ್  ಹೇಳಿದ್ದಾರೆ.

ವರದಿ ಆಧರಿಸಿ ತೀರ್ಪು ನೀಡಿದ ನ್ಯಾ. ಪ್ರತಿಭಾ ಸಿಂಗ್, ಭಾರತದ ಕಾನೂನಿನಲ್ಲಿ ಮಹಿಳೆ ತಾನು ಗರ್ಭಾವಸ್ಥೆಯಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುದು ಅಂತಿಮವಾಗಿ ಅವರೇ ನಿರ್ಧರಿಸಬೇಕು. ಈ ರೀತಿಯ ಪ್ರಕರಣಗಳಲ್ಲಿ ಮಹಿಳೆಯ ತೀವ್ರ ಸಂದಿಗ್ಧತೆಯನ್ನು ಎತ್ತಿ ತೋರಿಸುತ್ತವೆ. ಆಧುನಿಕ ತಂತ್ರಜ್ಞಾನದ ಸಹಾಯದಿಂದ ಗರ್ಭಪಾತ ಮಾಡಬಹುದು ಎಂದು ಆದೇಶಿಸಿದರು.

SCROLL FOR NEXT