ದೇಶ

ಸೋಲಿನ ನೈತಿಕ ಹೊಣೆಹೊತ್ತು ಗುಜರಾತ್ ಕಾಂಗ್ರೆಸ್ ಉಸ್ತುವಾರಿ ರಾಜೀನಾಮೆ

Lingaraj Badiger

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಗುಜರಾತ್ ಕಾಂಗ್ರೆಸ್ ಉಸ್ತುವಾರಿ ರಘು ಶರ್ಮಾ ಅವರು ಗುರುವಾರ ರಾಜೀನಾಮೆ ನೀಡಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಹಿನ್ನಡೆ ಅನುಭವಿಸಿರುವ ಕಾಂಗ್ರೆಸ್ ಸದ್ಯ ಕೇವಲ 19 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಕಳೆದ ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಪ್ರತಿರೋಧ ತೋರಿದ್ದ ಕಾಂಗ್ರೆಸ್‌ ಈ ಬಾರಿ ಯಾವುದೇ ಹೋರಾಟ ನೀಡದೇ ಹೀನಾಯವಾಗಿ ಸೋತಿದೆ.

ಕಳೆದ 27 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಈ 158 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಮತ್ತೆ ಅಧಿಕಾರಕ್ಕೇರುತ್ತಿದೆ.

SCROLL FOR NEXT