ಎಂಸಿಡಿ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಮಹಿಳಾ ಅಭ್ಯರ್ಥಿ 
ದೇಶ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಗೆದ್ದ 134 ಎಎಪಿ ಅಭ್ಯರ್ಥಿಗಳಲ್ಲಿ 69 ಮಂದಿ ಮಹಿಳೆಯರು!

ದೆಹಲಿಯ ಎಂಸಿಡಿ ಚುನಾವಣೆಯಲ್ಲಿ ಪುರುಷ ಅಭ್ಯರ್ಥಿಗಳಿಗೆ ಹೋಲಿಸಿದರೆ ಎರಡು ಹೆಚ್ಚುವರಿ ಸ್ಥಾನಗಳನ್ನು ಗಳಿಸಿ ವಿಜಯ ಪತಾಕೆ ಹಾರಿಸಿದ್ದಾರೆ.

ದೆಹಲಿ: ದೆಹಲಿಯ ಎಂಸಿಡಿ ಚುನಾವಣೆಯಲ್ಲಿ ಪುರುಷ ಅಭ್ಯರ್ಥಿಗಳಿಗೆ ಹೋಲಿಸಿದರೆ ಎರಡು ಹೆಚ್ಚುವರಿ ಸ್ಥಾನಗಳನ್ನು ಗಳಿಸಿ ವಿಜಯ ಪತಾಕೆ ಹಾರಿಸಿದ್ದಾರೆ.

134 ವಿಜೇತರಲ್ಲಿ ಒಟ್ಟು 69 ಮಹಿಳೆಯರು ಗೆಲುವು ಸಾಧಿಸಿದ್ದು, ಬಿಜೆಪಿಯ 49 ಮಹಿಳಾ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಗೆ ಸರಿಸಮನಾಗಿ ಎಎಪಿ ಕೂಡ 136 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

ಬಿಜೆಪಿ ಪಕ್ಷವು ಚುನಾವಣೆಯಲ್ಲಿ ಎರಡನೇ ಸ್ಥಾನದಲ್ಲಿದ್ದ ಕಾರಣ, ಕೇವಲ 49 ಮಹಿಳಾ ಅಭ್ಯರ್ಥಿಗಳು ಮಾತ್ರ ಗೆಲುವು ಸಾಧಿಸಿದ್ದಾರೆ. ಮಹಿಳಾ ಅಭ್ಯರ್ಥಿಗಳ ಗೆಲುವು ಶೇಕಡಾ 36 ರಷ್ಟಿದೆ ಎಂದು ಚುನಾವಣಾ ಫಲಿತಾಂಶಗಳು ತೋರಿಸಿವೆ.

ಪಕ್ಷವು 132 ಮಹಿಳಾ ಅಭ್ಯರ್ಥಿಗಳನ್ನು ಹೊಂದಿತ್ತು. ಕೇವಲ 3.7 ಪ್ರತಿಶತ ಮಹಿಳಾ ಅಭ್ಯರ್ಥಿಗಳು ಮಾತ್ರ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಗೆದ್ದಿರುವ ಒಟ್ಟಾರೆ ಸ್ಥಾನಗಳಲ್ಲಿ ಲಿಂಗ ಆಧಾರಿತ ವಿಜೇತರನ್ನು ಹೋಲಿಸಿದಾಗ, ಪಕ್ಷವು ಗೆದ್ದಿರುವ ಶೇಕಡ 55 ರಷ್ಟು ಸ್ಥಾನಗಳನ್ನು ಮಹಿಳಾ ಅಭ್ಯರ್ಥಿಗಳು ಹೊಂದಿದ್ದಾರೆ. ಕಾಂಗ್ರೆಸ್ ಒಂಬತ್ತು ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.

ಮಹಿಳಾ ಅಭ್ಯರ್ಥಿಗಳು ಈ ಬಾರಿ ಅದ್ಭುತ ಸಾಧನೆ ಮಾಡಿದ್ದಾರೆ. ನನ್ನ ವಾರ್ಡ್‌ನಲ್ಲಿ ಜನರ ಸೇವೆ ಮಾಡಲು ನನಗೆ ಅವಕಾಶ ಸಿಗುತ್ತಿರುವುದಕ್ಕೆ ತುಂಬಾ ಸಂತೋಷವಾಗಿದೆ. ಎಎಪಿ ಅಭಿವೃದ್ಧಿಗಾಗಿ ಕೆಲಸ ಮಾಡುವ ಪಕ್ಷವಾಗಿದೆ ಮತ್ತು ಅಧಿಕಾರ ವಹಿಸಿಕೊಂಡ ನಂತರ ನಾವು ಅದರತ್ತ ಗಮನ ಹರಿಸುತ್ತೇವೆ ಎಂದು ವಜೀರ್ ಪುರದಿಂದ ಗೆಲುವು ಸಾಧಿಸಿರುವ ಎಎಪಿ ಯ ಚೈತ್ರ ವಿದ್ಯಾರ್ಥಿ ಹೇಳಿದ್ದಾರೆ.

2017 ರ ಚುನಾವಣೆಯಲ್ಲಿ, ನಾಲ್ವರು ಸ್ವತಂತ್ರರೊಂದಿಗೆ ಬಿಎಸ್‌ಪಿ, ಐಎನ್‌ಎಲ್‌ಡಿ ಮತ್ತು ಎಸ್‌ಪಿಯ ಕೆಲವು ಅಭ್ಯರ್ಥಿಗಳು ಗೆದ್ದಿದ್ದಾರೆ. ಈ ಬಾರಿ, ದೆಹಲಿಯಲ್ಲಿ ಕೇವಲ ಮೂವರು ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT