ರಾಜೀವ್ ಶುಕ್ಲಾ 
ದೇಶ

ಹಿಮಾಚಲದಲ್ಲಿ ಆಪರೇಷನ್ ಕಮಲಕ್ಕೆ ಹೆದರುವುದಿಲ್ಲ: ಕಾಂಗ್ರೆಸ್

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಮುನ್ನುಗ್ಗುತ್ತಿದ್ದು, "ನಾವು 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ. ರಾಜ್ಯದಲ್ಲಿ ನಾವು ನೀಡಿದ್ದ 10 ಭರವಸೆಗಳನ್ನು ಜಾರಿಗೊಳಿಸುತ್ತೇವೆ. 'ಆಪರೇಷನ್ ಕಮಲ'ಕ್ಕೆ ಹೆದರುವುದಿಲ್ಲ...

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಮುನ್ನುಗ್ಗುತ್ತಿದ್ದು, "ನಾವು 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ. ರಾಜ್ಯದಲ್ಲಿ ನಾವು ನೀಡಿದ್ದ 10 ಭರವಸೆಗಳನ್ನು ಜಾರಿಗೊಳಿಸುತ್ತೇವೆ. 'ಆಪರೇಷನ್ ಕಮಲ'ಕ್ಕೆ ಹೆದರುವುದಿಲ್ಲ ಎಂದು ಹಿಮಾಚಲ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ರಾಜೀವ್ ಶುಕ್ಲಾ ಅವರು ಹೇಳಿದ್ದಾರೆ.

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 10 ಭರವಸೆಗಳನ್ನು ಜಾರಿಗೊಳಿಸಲಿದೆ ಎಂದು ರಾಜೀವ್ ಶುಕ್ಲಾ ಅವರು ತಿಳಿಸಿದ್ದಾರೆ.

"ಹಿಮಾಚಲ ಪ್ರದೇಶ ಫಲಿತಾಂಶ ಇತರ ರಾಜ್ಯಗಳಲ್ಲಿ ನಮ್ಮ ಪಕ್ಷದ ನೈತಿಕತೆ ಮತ್ತು ಪ್ರಭಾವವನ್ನು ಹೆಚ್ಚಿಸುತ್ತದೆ. ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ರಾಜಸ್ಥಾನ ಮತ್ತು ಛತ್ತೀಸ್‌ಗಢಕ್ಕೆ ಸಂದೇಶ ರವಾನೆಯಾಗಿದೆ" ಎಂದು ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ಅವರು ಹೇಳಿದ್ದಾರೆ.

68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12 ರಂದು ಚುನಾವಣೆ ನಡೆದಿದ್ದು, ಶೇ.75.6ರಷ್ಟು ಮತದಾನವಾಗಿತ್ತು. ಇಂದು ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ 40 ರಲ್ಲಿ ಹಾಗೂ ಬಿಜೆಪಿ 25ರಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಬಹುಮತಕ್ಕೆ 35 ಶಾಸಕರ ಅಗತ್ಯ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ