ಸಾಂದರ್ಭಿಕ ಚಿತ್ರ 
ದೇಶ

ಆಂಧ್ರ ಪ್ರದೇಶ: ಟ್ರ್ಯಾಕ್ಟರ್ ಪಲ್ಟಿ, ಮದುವೆಗೆ ತೆರಳುತ್ತಿದ್ದ 6 ಮಂದಿ ದುರ್ಮರಣ, ಹಲವರಿಗೆ ಗಾಯ

 ಟ್ರಾಕ್ಟರ್ ಪಲ್ಟಿಯಾಗಿ ಕಾಲುವೆಗೆ ಉರುಳಿಬಿದ್ದ ಪರಿಣಾಮ ಮದುವೆಗೆ ತೆರಳುತ್ತಿದ್ದ ಆರು ಮಂದಿ ಸಾವನ್ನಪ್ಪಿದ್ದು, ಇತರ 22 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಸಂಭವಿಸಿದೆ.

ಅಮರಾವತಿ: ಟ್ರಾಕ್ಟರ್ ಪಲ್ಟಿಯಾಗಿ ಕಾಲುವೆಗೆ ಉರುಳಿಬಿದ್ದ ಪರಿಣಾಮ ಮದುವೆಗೆ ತೆರಳುತ್ತಿದ್ದ ಆರು ಮಂದಿ ಸಾವನ್ನಪ್ಪಿದ್ದು, ಇತರ 22 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಸಂಭವಿಸಿದೆ.

ಪುತಲಪಟ್ಟು ಮಂಡಲದ ಲಕ್ಷ್ಮಯ್ಯ ಊರು ಗ್ರಾಮದ ಬಳಿ ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಟ್ರ್ಯಾಕ್ಟರ್ ಚಾಲಕ, ಇಬ್ಬರು ಮಹಿಳೆಯರು ಹಾಗೂ ಅನೇಕ ಮಕ್ಕಳು ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯ ಕೈಗೊಂಡರು. ಗಾಯಾಳುಗಳನ್ನು ಚಿತ್ತೂರು, ತಿರುಪತಿ ಮತ್ತು ವೆಲ್ಲೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಜೆಟ್ಟಿಪಲ್ಲೆ ಗ್ರಾಮದಲ್ಲಿ ಇಂದು ಮದುವೆ ನಿಗದಿಯಾಗಿತ್ತು. ಮದು ಮಗನೊಂದಿಗೆ ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಬದುಕುಳಿದವರು ಪೊಲೀಸರಿಗೆ ತಿಳಿಸಿದ್ದಾರೆ. ಮದು ಮಗ ಹೇಮಂತ್ ಕುಮಾರ್ ಕೂಡಾ ಗಾಯಗೊಂಡಿದ್ದು, ಚಿತ್ತೂರು ಜಿಲ್ಲಾಧಿಕಾರಿ ಹಾಗೂ ಎಸ್ ಪಿ ಚಿತ್ತೂರು ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT