ಸಾಂದರ್ಭಿಕ ಚಿತ್ರ 
ದೇಶ

ರಾಜಸ್ತಾನ: ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟ; ಐವರ ಸಾವು, 49 ಮಂದಿಗೆ ಗಾಯ

ರಾಜಸ್ಥಾನದ ಜೋಧ್‌ಪುರದಲ್ಲಿ ಮದುವೆಗಾಗಿ ಅತಿಥಿಗಳು ಸೇರಿದ್ದ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 49 ಮಂದಿ ಗಾಯಗೊಂಡಿದ್ದಾರೆ.

ಜೋಧಪುರ: ರಾಜಸ್ಥಾನದ ಜೋಧ್‌ಪುರದಲ್ಲಿ ಮದುವೆಗಾಗಿ ಅತಿಥಿಗಳು ಸೇರಿದ್ದ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 49 ಮಂದಿ ಗಾಯಗೊಂಡಿದ್ದಾರೆ.

ಭೂಂಗಾರ ಗ್ರಾಮದಲ್ಲಿ ಗುರುವಾರ ಅವಘಡ ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಎಂಜಿಎಚ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟದ ಪ್ರಭಾವದಿಂದ ಶೇರ್ಗಢ ಉಪವಿಭಾಗದ ಭುಂಗ್ರಾ ಗ್ರಾಮದಲ್ಲಿ ಮನೆಯ ಒಂದು ಭಾಗವೂ ಕುಸಿದಿದೆ ಎಂದು ಅವರು ಹೇಳಿದರು. ಗಾಯಗೊಂಡವರಲ್ಲಿ ಕೆಲವರಿಗೆ ಶೇ 80ರಿಂದ 100ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮದುಮಗ ಸುರೇಂದ್ರ ಸಿಂಗ್ ಅವರ ಮನೆಯಲ್ಲಿ ಅತಿಥಿಗಳು ಜಮಾಯಿಸಿದ್ದರು ಮತ್ತು ಅವರಿಗೆ ಆಹಾರವನ್ನು ಸಿದ್ಧಪಡಿಸಲಾಯಿತು.

ಮನೆಯ ಸ್ಟೋರ್ ರೂಂನಲ್ಲಿ ಇರಿಸಲಾಗಿದ್ದ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿದೆ ಎಂದು ಜೋಧ್‌ಪುರ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅನಿಲ್ ಕಯಾಲ್ ಹೇಳಿದ್ದಾರೆ.

ಇತರ ಅತಿಥಿಗಳು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಇಬ್ಬರು ಮಕ್ಕಳಾದ ರತನ್ ಸಿಂಗ್ (5) ಮತ್ತು ಖುಷ್ಬೂ (4) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಲ್ಲಾ ಗಾಯಾಳುಗಳನ್ನು ಎಂಜಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಕಯಲ್ ಹೇಳಿದರು.

ಸ್ಫೋಟದಲ್ಲಿ 49ಮಂದಿ ಗಾಯಗೊಂಡಿದ್ದು, ಐವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ. ಎಂಜಿ ಆಸ್ಪತ್ರೆಯ ಸೂಪರಿಂಟೆಂಡೆಂಟ್ ರಾಜ್ ಶ್ರೀ ಬೆಹ್ರಾ ಅವರು ಆಸ್ಪತ್ರೆಗೆ ಕರೆತರಲಾದ ಹತ್ತಕ್ಕೂ ಹೆಚ್ಚು ಗಾಯಾಳುಗಳು ಶೇಕಡಾ 80-100 ರಷ್ಟು ಸುಟ್ಟಗಾಯಗಳಿಗೆ ಒಳಗಾಗಿದ್ದಾರೆ ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕೇಂದ್ರ ಸಚಿವ ಮತ್ತು ಜೋಧ್‌ಪುರ ಸಂಸದ ಗಜೇಂದ್ರ ಸಿಂಗ್ ಶೇಖಾವತ್ ಅವರು ಘಟನೆಯಲ್ಲಿ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT