ಸೋನಿಯಾ ಗಾಂಧಿ 
ದೇಶ

ಸೋನಿಯಾ ಗಾಂಧಿ 76ನೇ ಹುಟ್ಟುಹಬ್ಬ: ಪ್ರಧಾನಿ ಮೋದಿ ಶುಭಾಶಯ

ದೇಶದ ಅತಿ ಹಳೆಯ ಪಕ್ಷ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಮತ್ತು ಸಂಯುಕ್ತ ಪ್ರಗತಿಪರ ಮೈತ್ರಿಕೂಟ(UPA)ದ ಅಧ್ಯಕ್ಷೆ, ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪತ್ನಿ ಸೋನಿಯಾ ಗಾಂಧಿಯವರ 76ನೇ ಹುಟ್ಟುಹಬ್ಬ. ದೇಶದ ಮೂಲೆಮೂಲೆಗಳಿಂದ ಅವರ ಅಭಿಮಾನಿಗಳು, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ನವದೆಹಲಿ: ದೇಶದ ಅತಿ ಹಳೆಯ ಪಕ್ಷ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಮತ್ತು ಸಂಯುಕ್ತ ಪ್ರಗತಿಪರ ಮೈತ್ರಿಕೂಟ(UPA)ದ ಅಧ್ಯಕ್ಷೆ, ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪತ್ನಿ ಸೋನಿಯಾ ಗಾಂಧಿಯವರ 76ನೇ ಹುಟ್ಟುಹಬ್ಬ. ದೇಶದ ಮೂಲೆಮೂಲೆಗಳಿಂದ ಅವರ ಅಭಿಮಾನಿಗಳು, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಸೋನಿಯಾ ಗಾಂಧಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಅವರು, ಶ್ರೀಮತಿ ಸೋನಿಯಾ ಗಾಂಧಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೀರ್ಘಾಯುಷ್ಯ ಮತ್ತು ಆರೋಗ್ಯವನ್ನು ಭಗವಂತ ಕರುಣಿಸಲಿ ಎಂದು ಹಾರೈಸಿದ್ದಾರೆ.

ಪ್ರಸ್ತುತ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ರಾಜಸ್ತಾನದಲ್ಲಿ ಸಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸೋನಿಯಾ ಗಾಂಧಿಯವರು ಆಗಮಿಸಿದ್ದಾರೆ. ಎರಡು ದಿನಗಳ ರಾಜಸ್ತಾನ ಪ್ರವಾಸ ಕೈಗೊಂಡಿದ್ದಾರೆ. ನಿನ್ನೆ ಅಪರಾಹ್ನ ಜೈಪುರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸೋನಿಯಾ ಗಾಂಧಿ ನಂತರ ಹೆಲಿಕಾಪ್ಟರ್ ನಲ್ಲಿ ಸವೈ ಮಾದೋಪುರ್ ಗೆ ತೆರಳಿದರು.

ರಂಥಬೋರ್ ನ ಶೇರ್ ಬಾಗ್ ಹೊಟೇಲ್ ನಲ್ಲಿ ಉಳಿದುಕೊಂಡಿದ್ದು ಅಲ್ಲಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಗುತ್ತದೆ.
ಸೋನಿಯಾ ಗಾಂಧಿಯವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಸವೈ ಮಾದೋಪುರ್ ಗೆ ತೆರಳಿದ್ದಾರೆ. ಇಂದು ಕುಟುಂಬದವರು ಸೇರಿ ಸೋನಿಯಾ ಗಾಂಧಿ ಹುಟ್ಟುಹಬ್ಬ ಆಚರಿಸಲಿದ್ದಾರೆ. ಸ್ಥಳೀಯ ಆಡಳಿತ ಅವರಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಕಳೆದ ಸೋಮವಾರ ಜಲವಾರ್ ಜಿಲ್ಲೆಯಿಂದ ರಾಜಸ್ತಾನ ಪ್ರವೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!