ಅಫ್ತಾಬ್ 
ದೇಶ

ಶ್ರದ್ಧಾ ಹತ್ಯೆ ಪ್ರಕರಣ: ಆರೋಪಿ ಅಫ್ತಾಬ್ ಪೂನಾವಾಲಾ ನ್ಯಾಯಾಂಗ ಬಂಧನ 14 ದಿನ ವಿಸ್ತರಣೆ

ಅಫ್ತಾಬ್ ಅಮೀನ್ ಪೂನಾವಾಲಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ಸಾಕೇತ್ ನ್ಯಾಯಾಲಯವು 14 ದಿನಗಳವರೆಗೆ ವಿಸ್ತರಿಸಿದೆ.

ನವದೆಹಲಿ: ಅಫ್ತಾಬ್ ಅಮೀನ್ ಪೂನಾವಾಲಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ಸಾಕೇತ್ ನ್ಯಾಯಾಲಯವು 14 ದಿನಗಳವರೆಗೆ ವಿಸ್ತರಿಸಿದೆ.

ಶ್ರದ್ಧಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್'ನನ್ನು ಇಂದು ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.

ದೆಹಲಿ ಪೊಲೀಸರು ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಕೋರಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದರು. ವಿಚಾರಣೆಯ ನಂತರ ನ್ಯಾಯಾಲಯವು ಪೂನಾವಾಲಾನ ನ್ಯಾಯಾಂಗ ಬಂಧನವನ್ನು ವಿಸ್ತರಿಸಿತು.

ಇದಕ್ಕೂ ಮುನ್ನ ನ್ಯಾಯಾಲಯವು ಅಫ್ತಾಬ್‌ನನ್ನು 13 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು ಅದು ಇಂದಿಗೆ ಕೊನೆಗೊಳ್ಳಲಿದೆ.

ಅಫ್ತಾಬ್ ಪೂನವಾಲಾ ದೆಹಲಿಯ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ತನ್ನೊಂದಿಗಿದ್ದ ಪ್ರೇಯಸಿ ಶ್ರದ್ಧಾಳನ್ನು ಕೊಂದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿರಿಸಿ ನಂತರ ಮೃತ ದೇಹದ ಭಾಗಗಳನ್ನು ರಾಷ್ಟ್ರ ರಾಜಧಾನಿಯಾದ್ಯಂತ ವಿವಿಧ ಸ್ಥಳಗಳಲ್ಲಿ ಎಸೆದಿದ್ದ.

ಅಫ್ತಾಬ್‌ನಲ್ಲಿ ಪಾಲಿಗ್ರಾಫ್ ಮತ್ತು ನಾರ್ಕೋ ಪರೀಕ್ಷೆಗಳನ್ನು ನಡೆಸಲಾಗಿದ್ದು, ಪೊಲೀಸರು ಈಗ ತಮ್ಮ ಪ್ರಕರಣವನ್ನು ಬಲಪಡಿಸಲು ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?