ಉದ್ಧವ್ ಠಾಕ್ರೆ 
ದೇಶ

ಕರ್ನಾಟಕ ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿಯಿಂದ ಮಹಾರಾಷ್ಟ್ರದ ಗ್ರಾಮಗಳ ಮಾರಾಟ: ಉದ್ಧವ್ ಠಾಕ್ರೆ

ಕರ್ನಾಟಕ ಚುನಾವಣೆಗಾಗಿ ಬಿಜೆಪಿ, ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡುತ್ತಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬಯಿ: ಕರ್ನಾಟಕ ಚುನಾವಣೆಗಾಗಿ ಬಿಜೆಪಿ, ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡುತ್ತಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ವರ್ಷ ಕರ್ನಾಟಕವಿಧಾನಸಭೆ ಚುನಾವಣೆಗೆ ಮುನ್ನ ಮಹಾರಾಷ್ಟ್ರದಿಂದ ಗುಜರಾತ್‌ಗೆ ದೊಡ್ಡ ಮೊತ್ತದ ಯೋಜನೆಗಳನ್ನು ಸ್ಥಳಾಂತರಿಸಿದಂತೆಯೇ, ಚುನಾವಣೆ ನಡೆಯುವ ಕರ್ನಾಟಕದಲ್ಲಿ ರಾಜ್ಯದ ಗ್ರಾಮಗಳನ್ನು ವಿಲೀನಗೊಳಿಸಬಹುದು ಎಂದು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು

ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ, ತಮ್ಮ ಪಕ್ಷದ ಮುಖವಾಣಿ ‘ಸಾಮ್ನಾ‘ ಪತ್ರಿಕೆಯ ಸಂಪಾದಕೀಯದಲ್ಲಿ ಬರೆದಿರುವ ಅವರು,  ‘ಮಹಾರಾಷ್ಟ್ರದ ಅಭಿವೃದ್ಧಿ ಯೋಜನೆಗಳನ್ನೆಲ್ಲಾ ಕಸಿದು ಗುಜರಾತ್‌ಗೆ ಕೊಟ್ಟಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗದ ವೇಳೆಯಲ್ಲಿ ಗುಜರಾತ್‌ನ ಸ್ಥಿತಿಗತಿ ಹಾಗೂ ಮೊರ್ಬಿ ಸೇತುವೆ ದುರಂತದ ಹೊರತಾಗಿಯೂ ಈ ಫಲಿತಾಂಶ ಬಂದಿರುವುದು ಅಚ್ಚರಿಯೇನಲ್ಲ ಎಂದು ಅವರು ಹೇಳಿದ್ದಾರೆ.

‘ಹಲವು ಜಾಗತಿಕ ಸಮಾವೇಶಗಳು ಗುಜರಾತ್‌ನಲ್ಲಿ ನಡೆದವು. ಜಾಗತಿಕ ನಾಯಕರು ಸಬರಮತಿ ಆಶ್ರಮಕ್ಕೆ ಭೇಟಿ ನೀಡುತ್ತಾರೆ. ಪ್ರಧಾನಿ ಮೋದಿಯವರಿಂದಾಗಿ ಇವೆಲ್ಲಾ ಆಗಿದೆ. ಹಲವು ಬೃಹತ್‌ ಅಭಿವೃದ್ಧಿ ಯೋಜನೆಗಳನ್ನು ಮಹಾರಾಷ್ಟ್ರದಿಂದ ಕಸಿದು ಗುಜರಾತ್‌ಗೆ ತೆಗೆದುಕೊಂಡು ಹೋಗಲಾಗಿದೆ. ಸರ್ದಾರ್‌ ಪಟೇಲರ ಮೂರ್ತಿ, ಪ್ರಧಾನಿ ಮೋದಿಯವರ ಗುಜರಾತ್‌ ಅಸ್ಮಿತೆ, ಇವೆಲ್ಲಾ ಕಾರಣಗಳಿಂದ ಗುಜರಾತ್‌ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ‘ ಎಂದಿದ್ದಾರೆ.

‘ಮಹಾರಾಷ್ಟ್ರ ಅಭಿವೃದ್ಧಿ ಯೋಜನೆಗಳು ಗುಜರಾತ್‌ಗೆ ಹೋಗಿದ್ದು ಕೂಡ ಬಿಜೆಪಿ ಗೆಲುವಿನಲ್ಲಿ ಪಾತ್ರ ವಹಿಸಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈ ಯೋಜನೆಗಳನ್ನು ಗುಜರಾತ್‌ಗೆ ಮಾರಾಟ ಮಾಡಿದರು. ಈಗ ಕರ್ನಾಟಕ ಚುನಾವಣೆ ಗೆಲ್ಲಲು ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡಲಾಗುತ್ತಿದೆ‘ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹಾರಾಷ್ಟ್ರದ ಪ್ರದೇಶಗಳ ಮೇಲೆ ಹಕ್ಕು ಸಾಧಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಮಹಾರಾಷ್ಟ್ರವನ್ನು ಅಸ್ಥಿರಗೊಳಿಸುವ ತಂತ್ರವನ್ನು ಬಿಜೆಪಿ ಹೊಂದಿದೆ ಎಂದು ಠಾಕ್ರೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT