ಇಮ್ರಾನ್ ಖೇಡವಾಲಾ 
ದೇಶ

182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಖೇಡವಾಲಾ ಏಕೈಕ ಮುಸ್ಲಿಂ ಶಾಸಕ

ಇತ್ತೀಚಿಗೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಡಳಿರೂಢ ಬಿಜೆಪಿ ಐತಿಹಾಸಿಕ ಗೆಲುವಿನೊಂದಿಗೆ ಸತತ 7ನೇ ಬಾರಿಗೆ ಅಧಿಕಾರಕ್ಕೆ ಏರುತ್ತಿದ್ದು, 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಏಕೈಕ ಮುಸ್ಲಿಂ ಅಭ್ಯರ್ಥಿಯೊಬ್ಬರು ಆಯ್ಕೆಯಾಗಿದ್ದಾರೆ.

ಅಹಮದಾಬಾದ್: ಇತ್ತೀಚಿಗೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಡಳಿರೂಢ ಬಿಜೆಪಿ ಐತಿಹಾಸಿಕ ಗೆಲುವಿನೊಂದಿಗೆ ಸತತ 7ನೇ ಬಾರಿಗೆ ಅಧಿಕಾರಕ್ಕೆ ಏರುತ್ತಿದ್ದು, 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಏಕೈಕ ಮುಸ್ಲಿಂ ಅಭ್ಯರ್ಥಿಯೊಬ್ಬರು ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್‌ನ ಇಮ್ರಾನ್ ಖೇಡವಾಲಾ ಅವರು ಈಗಷ್ಟೇ ಮುಗಿದ ಚುನಾವಣೆಯಲ್ಲಿ ಆಯ್ಕೆಯಾದ ಏಕೈಕ ಮುಸ್ಲಿಂ ಶಾಸಕರಾಗಿದ್ದಾರೆ.

ಕಳೆದ ವಿಧಾನಸಭೆಯಲ್ಲಿ ಮೂವರು ಮುಸ್ಲಿಂ ಶಾಸಕರಿದ್ದರು ಮತ್ತು ಅವರೆಲ್ಲರೂ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು.

ಅಹಮದಾಬಾದ್ ನಗರದ ಜಮಾಲ್‌ಪುರ್-ಖಾಡಿಯಾ ವಿಧಾನಸಭಾ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕರಾಗಿರುವ ಖೇಡವಾಲಾ ಅವರು 13,658 ಮತಗಳ ಅಂತರದಿಂದ ಗೆದ್ದು ಶಾಸಕ ಸ್ಥಾನ ಉಳಿಸಿಕೊಂಡಿದ್ದಾರೆ.

ಖೇಡವಾಲಾ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಭೂಷಣ್ ಭಟ್ ಅವರನ್ನು ಮುಸ್ಲಿಂ ಬಹುಸಂಖ್ಯಾತ ಕ್ಷೇತ್ರದಲ್ಲಿ ಸೋಲಿಸಿದರು, ಅಲ್ಲಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ರಾಜ್ಯ ಅಧ್ಯಕ್ಷ ಮತ್ತು ಮಾಜಿ ಶಾಸಕ ಸಬೀರ್ ಕಬ್ಲಿವಾಲಾ ಕೂಡ ಕಣದಲ್ಲಿದ್ದರು.

ಮೂವರು ಹಾಲಿ ಶಾಸಕರು ಸೇರಿದಂತೆ ಒಟ್ಟು ಆರು ಮುಸ್ಲಿಂ ಅಭ್ಯರ್ಥಿಗಳನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಈ ಪೈಕಿ ಇಬ್ಬರು ಶಾಸಕರು ಸೇರಿದಂತೆ ಐವರು ಅಭ್ಯರ್ಥಿಗಳು ಸೋತಿದ್ದಾರೆ.

2017 ರಲ್ಲಿ, ಪ್ರಮುಖ ವಿರೋಧ ಪಕ್ಷದಿಂದ ಕಣಕ್ಕಿಳಿದ ಅಲ್ಪಸಂಖ್ಯಾತ ಸಮುದಾಯದ ಐದು ಅಭ್ಯರ್ಥಿಗಳಲ್ಲಿ ಮೂವರು ವಿಜಯಶಾಲಿಯಾಗಿದ್ದರು. ಗುಜರಾತ್‌ನಲ್ಲಿ ಒಟ್ಟು ಜನಸಂಖ್ಯೆಯ ಸುಮಾರು ಶೇ. 10 ರಷ್ಟು ಮುಸ್ಲಿಮರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?