ಭೂಪೇಂದ್ರ ಪಟೇಲ್ 
ದೇಶ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಭೂಪೇಂದ್ರ ಪಟೇಲ್ ಆಯ್ಕೆ, ಎರಡನೇ ಬಾರಿ ಗುಜರಾತ್ ಸಿಎಂ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶನಿವಾರ ಮರು ಆಯ್ಕೆಯಾಗಿದ್ದು, ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.

ಅಹಮದಾಬಾದ್: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶನಿವಾರ ಮರು ಆಯ್ಕೆಯಾಗಿದ್ದು, ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.

ಇಂದು ಗಾಂಧಿನಗರದಲ್ಲಿರುವ ಬಿಜೆಪಿ ರಾಜ್ಯ ಕೇಂದ್ರ ಕಚೇರಿ ‘ಕಮಲಂ’ನಲ್ಲಿ ನಡೆದ ನೂತನ ಶಾಸಕರ ಸಭೆಯಲ್ಲಿ 
60 ವರ್ಷದ ಪಟೇಲ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಯಿತು. 

ಪಕ್ಷದ ಕೇಂದ್ರ ವೀಕ್ಷಕರಾಗಿ ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಬಿ ಎಸ್ ಯಡಿಯೂರಪ್ಪ ಮತ್ತು ಅರ್ಜುನ್ ಮುಂಡಾ ಅವರು ಸಭೆಯಲ್ಲಿ ಹಾಜರಿದ್ದರು.

ಭೂಪೇಂದ್ರ ಪಟೇಲ್ ಅವರು ಸೋಮವಾರ ಎರಡನೇ ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಈಗಷ್ಟೇ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 156 ಸ್ಥಾನಗಳನ್ನು ಪಡೆಯುವ ಮೂಲಕ ಐತಿಹಾಸಿಕ ಗೆಲುವು ದಾಖಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!