ದೇಶ

ಗುಜರಾತ್ ಚುನಾವಣಾ ಫಲಿತಾಂಶ ಭಾರತ್ ಜೋಡೋ ಯಾತ್ರೆ ಮೇಲೆ ಪರಿಣಾಮ ಬೀರಲ್ಲ: ಕಾಂಗ್ರೆಸ್ 

Nagaraja AB

ನವದೆಹಲಿ: ಗುಜರಾತ್ ಚುನಾವಣಾ ಫಲಿತಾಂಶ ಭಾರತ್ ಜೋಡೋ ಯಾತ್ರೆ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದಿರುವ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ರಮೇಶ್ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಬಗ್ಗೆ ವಿಶ್ಲೇಷಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಆದಾಗ್ಯೂ, ಗುಜರಾತ್ ನಲ್ಲಿ ಸರ್ಕಾರಿ ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಳ್ಳಲಾಗಿತ್ತು. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಿಜೆಪಿಯಿಂದ ಬಾಲಕಿ ಬಳಕೆ ಕುರಿತಂತೆ ಕಾಂಗ್ರೆಸ್ ನೀಡಿದ ದೂರಿನ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದಾರೆ. 

ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೊಂದರೆ ನೀಡಲು ಬಿಜೆಪಿ, ಆಮ್ ಆದ್ಮಿ ಪಕ್ಷ ಹಾಗೂ ಎಐಎಂಐಎಂ ಮೈತ್ರಿ ಮಾಡಿಕೊಂಡಿದ್ದವು  ಹೇಳಿದ ಅವರು, ಶೀಘ್ರದಲ್ಲೇ ರಾಜ್ಯ ಘಟಕ ಪುನರ್ ರಚಿಸಲಾಗುವುದು, ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿತರ ಹಿರಿಯ ನಾಯಕರು ಕ್ರಮ ಕೈಗೊಳ್ಳಲಿದ್ದಾರೆ  ಎಂದು ಅವರು ತಿಳಿಸಿದರು. 

ಗುಜರಾತ್ ಚುನಾವಣಾ ಫಲಿತಾಂಶ ನಿರಾಸೆ ಮೂಡಿಸಿದೆ. ಮತಗಳ ಹಂಚಿಕೆ ಶೇ 40 ರಿಂದ 27ಕ್ಕೆ ಕುಸಿದಿದೆ. ಆದರೆ ಶೇ. 27 ರಷ್ಟು ಮತಗಳ ಹಂಚಿಕೆ ಪಕ್ಷದ ಮೂಲವಾಗಿದ್ದು, ಅದನ್ನು ಶೇ. 40ಕ್ಕೆ ಹೆಚ್ಚಿಸಲು ಕಷ್ಟವಾಗಲ್ಲ ಎಂದು ಜೈರಾಮ್ ರಮೇಶ್ ತಿಳಿಸಿದರು. 

SCROLL FOR NEXT