ಸಂಗ್ರಹ ಚಿತ್ರ 
ದೇಶ

ದೆಹಲಿ: ಫ್ಲೈಓವರ್‌ನಿಂದ ಕಬ್ಬಿಣದ ತುಂಡು ತಲೆ ಮೇಲೆ ಬಿದ್ದು ಬಾಲಕ ಸಾವು

ಫ್ಲೈಓವರ್‌ನಿಂದ ಕಬ್ಬಿಣದ ತುಂಡೊಂದು ತಲೆ ಮೇಲೆ ಬಿದ್ದ ಪರಿಣಾಮ ಪುಟ್ಟ ಬಾಲಕನೋರ್ವ ಸಾವನ್ನಪ್ಪಿರುವ ದೆಹಲಿಯಲ್ಲಿ ನಡೆದಿದೆ.

ನವದೆಹಲಿ: ಫ್ಲೈಓವರ್‌ನಿಂದ ಕಬ್ಬಿಣದ ತುಂಡೊಂದು ತಲೆ ಮೇಲೆ ಬಿದ್ದ ಪರಿಣಾಮ ಪುಟ್ಟ ಬಾಲಕನೋರ್ವ ಸಾವನ್ನಪ್ಪಿರುವ ದೆಹಲಿಯಲ್ಲಿ ನಡೆದಿದೆ.

ಭಾನುವಾರ ದೆಹಲಿಯ ಪುಸ್ತಾ ರಸ್ತೆಯ ಥೋಕರ್ ನಂ.18ರ ರಸ್ತೆ ಬಳಿ ಮೇಲ್ಸೇತುವೆಯ ಕೆಳಗೆ ನಿಂತಿದ್ದ ಬಾಲಕನ ತಲೆ ಮೇಲೆ ಕಬ್ಬಿಣದ ಸರಳು ಬಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಇದನ್ನೂ ಓದಿ: ಐಐಟಿ ಗುವಾಹಟಿ ಪ್ರಾಧ್ಯಾಪಕ ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆ
 
ದೆಹಲಿ-ಡೆಹ್ರಾಡೂನ್ ಮೇಲ್ಸೇತುವೆಯಲ್ಲಿ ನಡೆಯುತ್ತಿರುವ ಕಾಮಗಾರಿಯ ವೇಳೆ ಕಬ್ಬಿಣದ ತುಂಡನ್ನು ಕಳಚುತ್ತಿದ್ದಾಗ ಆಕಸ್ಮಿಕವಾಗಿ ಅದು ಕಾರ್ಮಿಕರ ನಿಯಂತ್ರಣ ತಪ್ಪಿ ಬಾಲಕನಿಗೆ ಬಡಿದಿದೆ. ಈ ವೇಳೆ ಬಾಲಕ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತ ಅಷ್ಟುಹೊತ್ತಿಗಾಗಲೇ ಮೃತಪಟ್ಟಿದ್ದ ಎನ್ನಲಾಗಿದೆ.

ಪ್ರಸ್ತುತ ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಸ್‌ಡಿಎನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೆಡಿಕೋ-ಲೀಗಲ್ ಕೇಸ್ (ಎಂಎಲ್‌ಸಿ) ದಾಖಲಿಸಲಾಗಿದೆ. ಅಂತೆಯೇ ಕಾಮಗಾರಿ ಗುತ್ತಿಗೆದಾರನ ವಿರುದ್ಧ ಐಪಿಸಿ ಸೆಕ್ಷನ್ 304 (ಎ) ಅಡಿಯಲ್ಲಿ ಕಾನೂನು ಕ್ರಮವನ್ನೂ ಆರಂಭಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!