ನಾಗ್ಪುರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ ಪ್ರಧಾನಿ ಮೋದಿ. 
ದೇಶ

ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ: ನಾಗ್ಪುರ-ಬಿಲಾಸ್ಪುರ್ ವಂದೇ ಭಾರತ್ ಎಕ್ಸ್​ಪ್ರೆಸ್​'ಗೆ ಚಾಲನೆ

ಮಹಾರಾಷ್ಟ್ರ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಭೇಟಿ ನೀಡಿದ್ದು, ನಾಗ್ಪುರ ಮತ್ತು ಛತ್ತೀಸ್‌ಗಢದ ಬಿಲಾಸ್‌ಪುರ ನಡುವೆ ಸಂಚರಿಸಲಿರುವ ಆರನೇ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಭಾನುವಾರ ಚಾಲನೆ ನೀಡಿದರು.

ನವದೆಹಲಿ: ಮಹಾರಾಷ್ಟ್ರ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಭೇಟಿ ನೀಡಿದ್ದು, ನಾಗ್ಪುರ ಮತ್ತು ಛತ್ತೀಸ್‌ಗಢದ ಬಿಲಾಸ್‌ಪುರ ನಡುವೆ ಸಂಚರಿಸಲಿರುವ ಆರನೇ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಭಾನುವಾರ ಚಾಲನೆ ನೀಡಿದರು.

ಮಹಾರಾಷ್ಟ್ರ ರಾಜ್ಯ ಭೇಟಿ ನೀಡಿದ ಮೋದಿಯವರನ್ನು ಮಹಾರಾಷ್ಟ್ರ ರಾಜ್ಯಪಾಲ ಕೊಶಿಯಾರಿ, ಕೇಂದ್ರ ಸಚಿವ ನಿತಿನ್‌ ಗಡ್ಕರಿ, ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡಣಾವೀಸ್‌ ಆತ್ಮೀಯವಾಗಿ ಬರಮಾಡಿಕೊಂಡರು.

ನಂತರ ಮೋದಿಯವರು ನಾಗ್ಪುರ ಮತ್ತು ಛತ್ತೀಸ್‌ಗಢದ ಬಿಲಾಸ್‌ಪುರ ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದರು. ರೈಲಿಗೆ ಚಾಲನೆ ನೀಡಿದ ಬಳಿಕ ಮೋದಿಯವರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರತ್ತ ಕೈ ಬೀಸಿದರು. ಇದೇ ವೇಳೆ ಪ್ರಧಾನಮಂತ್ರಿಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಅಡಿಗಲ್ಲು ಹಾಕಿದರು.

ರೈಲಿಗೆ ಚಾಲನೆ ನೀಡಿದ ಬಳಿಕ ಮೋದಿಯವರು, ನಂತರ ಟಿಕೆಟ್ ಖರೀದಿಸಿ ವಿದ್ಯಾರ್ಥಿಗಳೊಂದಿಗೆ ಪ್ರಯಾಣ ಮಾಡಿದರು. ಈ ವೇಳೆ ವಿದ್ಯಾರ್ಥಿಗಳೊಂದಿಗೆ ಮಾತುಕತೆಯನ್ನೂ ನಡೆಸಿದರು.

ಮೋದಿಯವರು ಚಾಲನೆ ನೀಡಿರುವ ಈ ರೈಲು ಬೆಳಗ್ಗೆ 6.45ಕ್ಕೆ ಬಿಲಾಸ್‌ಪುರದಿಂದ ಹೊರಟು ಮಧ್ಯಾಹ್ನ 12.15ಕ್ಕೆ ನಾಗ್ಪುರ ತಲುಪಲಿದೆ. ಅದೇ ರೀತಿ ನಾಗ್ಪುರದಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ರಾತ್ರಿ 7.35ಕ್ಕೆ ಬಿಲಾಸ್ಪುರ ತಲುಪಲಿದೆ.

ಸೂಪರ್‌ಫಾಸ್ಟ್ ರೈಲುಗಳು ನಾಗಪುರವನ್ನು ತಲುಪಲು ಸುಮಾರು ಏಳು ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಆದರೆ, ವಂದೇ ಭಾರತ್ ರೈಲು ಸುಮಾರು ಐದೂವರೆ ಗಂಟೆಗಳಲ್ಲಿ ತಲುಪಲಿದೆ.

ವಂದೇ ಭಾರತ್ ರೈಲು ಈ ವರ್ಷದ ಅಕ್ಟೋಬರ್‌ನಲ್ಲಿ ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ಮೊದಲ ಬಾರಿಗೆ ಉದ್ಘಾಟನೆಗೊಂಡಿತು. ಮುಂದಿನ ವರ್ಷ ಆಗಸ್ಟ್ ವೇಳೆಗೆ 75 ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸುವ ಗುರಿಯನ್ನು ರೈಲ್ವೇ ಹೊಂದಿದೆ.

ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ರೈಲಿನ ಎಲ್ಲಾ ಕೋಚ್‌ಗಳು ಸ್ವಯಂಚಾಲಿತ ಬಾಗಿಲುಗಳು, ಜಿಪಿಎಸ್-ಆಧಾರಿತ ಆಡಿಯೊ-ವಿಶುವಲ್ ಪ್ಯಾಸೆಂಜರ್ ಮಾಹಿತಿ ವ್ಯವಸ್ಥೆ, ಮನರಂಜನಾ ಉದ್ದೇಶಗಳಿಗಾಗಿ ಆನ್‌ಬೋರ್ಡ್ ಹಾಟ್‌ಸ್ಪಾಟ್ ವೈ-ಫೈ ಮತ್ತು ಆರಾಮದಾಯಕ ಆಸನಗಳನ್ನು ಹೊಂದಿವೆ. ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಫೆಬ್ರವರಿ 15, 2019 ರಂದು ನವದೆಹಲಿ-ಕಾನ್ಪುರ-ಅಲಹಾಬಾದ್-ವಾರಣಾಸಿ ಮಾರ್ಗದಲ್ಲಿ ಚಾಲನೆ ನೀಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ