ಅಖಿಲೇಶ್ ಯಾದವ್ 
ದೇಶ

2024ಕ್ಕೆ ಕೇಂದ್ರದಲ್ಲಿ 'ಪರ್ಯಾಯ' ಸರ್ಕಾರ ರಚನೆಗೆ ಪ್ರತಿಪಕ್ಷಗಳು ಶ್ರಮಿಸುತ್ತಿವೆ: ಅಖಿಲೇಶ್ ಯಾದವ್

2024ಕ್ಕೆ ಕೇಂದ್ರದಲ್ಲಿ ಪ್ರಸ್ತುತ ಸರ್ಕಾರಕ್ಕೆ ಪ್ರತಿಯಾಗಿ 'ಪರ್ಯಾಯ' ಸರ್ಕಾರ ರಚನೆಗೆ ಪ್ರತಿಪಕ್ಷಗಳು ಶ್ರಮಿಸುತ್ತಿವೆ ಮತ್ತು ವಿರೋಧ ಪಕ್ಷದ ನಾಯಕರು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್...

ನವದೆಹಲಿ: 2024ಕ್ಕೆ ಕೇಂದ್ರದಲ್ಲಿ ಪ್ರಸ್ತುತ ಸರ್ಕಾರಕ್ಕೆ ಪ್ರತಿಯಾಗಿ 'ಪರ್ಯಾಯ' ಸರ್ಕಾರ ರಚನೆಗೆ ಪ್ರತಿಪಕ್ಷಗಳು ಶ್ರಮಿಸುತ್ತಿವೆ ಮತ್ತು ವಿರೋಧ ಪಕ್ಷದ ನಾಯಕರು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸೋಮವಾರ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉತ್ತರ ಪ್ರದೇಶ ಮಾಜಿ ಸಿಎಂ, ಹಣದುಬ್ಬರ ಉತ್ತುಂಗದಲ್ಲಿದ್ದು, ನಿರುದ್ಯೋಗ ಹೆಚ್ಚುತ್ತಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ಅವರು ಎಲ್ಲ ಭಾರತೀಯರಿಗೆ ನೀಡಿದ್ದ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವುದರಿಂದ ಕೇಂದ್ರದಲ್ಲಿ 'ಪರ್ಯಾಯ' ಸರ್ಕಾರ ರಚನೆ ಇಂದಿನ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

"2024ಕ್ಕೆ ಪರ್ಯಾಯ ಸರ್ಕಾರ ರಚಿಸಲು ನಿರಂತರ ಕಸರತ್ತು ನಡೆಯುತ್ತಿದೆ. ನಿತೀಶ್‌ಜಿ, ಮಮತಾಜಿ ಮತ್ತು ಕೆಸಿಆರ್ ಸಾಹೆಬ್ ಅದಕ್ಕಾಗಿ ಶ್ರಮಿಸುತ್ತಿದ್ದಾರೆ. ಹಣದುಬ್ಬರ ಉತ್ತುಂಗದಲ್ಲಿರುವಾಗ ಪರ್ಯಾಯ ಸರ್ಕಾರದ ಅಗತ್ಯವಿದೆ" ಎಂದು ಯಾದವ್ ಹೇಳಿದರು.

'ಉತ್ತರ ಪ್ರದೇಶದ ಜನರಿಗೆ ದ್ರೋಹ ಮಾಡಲಾಗಿದೆ. ಉತ್ತರ ಪ್ರದೇಶವು ಸಮೃದ್ಧಿ ಮತ್ತು ಅಭಿವೃದ್ಧಿಯ ಹಾದಿಯಲ್ಲಿರಬೇಕು. ಆದರೆ ಈಗ ಎಲ್ಲಿದೆ?' ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನಿಸಿದರು.

ಉತ್ತರ ಪ್ರದೇಶದಿಂದ ಲೋಕಸಭೆಗೆ ಆಯ್ಕೆಯಾಗಿರುವ ಅವರ ಪತ್ನಿ ಡಿಂಪಲ್ ಯಾದವ್ ಸೋಮವಾರ ಸದನದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT