ದೇಶ

ಸತತ 2ನೇ ಅವಧಿಗೆ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಇಂದು ಪ್ರಮಾಣವಚನ: ಬಿಎಸ್'ವೈ, ಸಿಎಂ ಬೊಮ್ಮಾಯಿ ಭಾಗಿ

Manjula VN

ಅಹಮದಾಬಾದ್: ಗುಜರಾತ್ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಭೂಪೇಂದ್ರ ಪಟೇಲ್ ಅವರು ಸೋಮವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾಲ್ಗೊಳ್ಳುತ್ತಿದ್ದಾರೆ.

ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಭೂಪೇಂದ್ರ ಪಟೇಲ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಗುಜರಾತ್‍ನ 18ನೇ ಮುಖ್ಯಮಂತ್ರಿಗೆ ರಾಜ್ಯಪಾಲ ಆಚಾರ್ಯ ದೇವವ್ರತ್ ಪ್ರಮಾಣವಚನ ಭೋಧಿಸಲಿದ್ದಾರೆ.

ಗಾಂಧಿನಗರದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದು, ಸಮಾರಂಭಕ್ಕೆ ಮಾಡಿ ಸಿಎಂ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೆಲವರಿಗೆ ಆಹ್ವಾನ ನೀಡಲಾಗಿದೆ.

ಯಡಿಯೂರಪ್ಪ ಶನಿವಾರವೇ ಗುಜರಾತ್‌ ರಾಜ್ಯ ತಲುಪಿದ್ದು, ಏಕತಾ ಪ್ರತಿಮೆಗೆ ಭೇಟಿ ನೀಡಿದರು. ನಂತರ ಶನಿವಾರ ಗಾಂಧಿನಗರದಲ್ಲಿ ನಡೆದ ಬಿಜೆಪಿ ಗುಜರಾತ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅರ್ಜುನ್ ಮುಂಡಾ ಅವರೊಂದಿಗೆ ಪಕ್ಷದ ಕೇಂದ್ರ ವೀಕ್ಷಕರಾಗಿ ಯಡಿಯೂರಪ್ಪ ಭಾಗವಹಿಸಿದ್ದರು. ಭೂಪೇಂದ್ರ ಪಟೇಲ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಇನ್ನು ಮುಖ್ಯಮಂತ್ರಿ ಬೊಮ್ಮಾಯಿಯವರೂ ಕೂಡ ಇಂದು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಲಿದ್ದು, ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ರಾಜ್ಯಕ್ಕೆ ಮರಳಲಿದ್ದಾರೆಂದು ವರದಿಗಳು ತಿಳಿಸಿವೆ.

SCROLL FOR NEXT