ದೇಶ

ಒಂದು ವರ್ಷ ಜೈಲಿನಲ್ಲಿ ಕಳೆದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಜಾಮೀನು

Nagaraja AB

ಮುಂಬೈ: ಭ್ರಷ್ಟಾಚಾರ ಪ್ರಕರಣದಲ್ಲಿ ಒಂದು ವರ್ಷ ಜೈಲುವಾಸ ಅನುಭವಿಸಿದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಬಾಂಬೆ ಹೈಕೋರ್ಟ್ ಕೊನೆಗೂ ಜಾಮೀನು ಮಂಜೂರು ಮಾಡಿದೆ.

ಎರಡು ಕಡೆಯ ವಾದ ಆಲಿಸಿದ ನಂತರ ನ್ಯಾಯಮೂರ್ತಿ ಎಂಎಸ್ ಕಾರ್ನಿಕ್ ಅವರನ್ನೊಳಗೊಂಡ ಏಕ ಸದಸ್ಯ ಪೀಠ, ಕಳೆದ ವಾರ ಆದೇಶವನ್ನು ಕಾಯ್ದಿರಿಸಿತ್ತು. 

ಕಳೆದ ತಿಂಗಳು 74 ವರ್ಷದ ದೇಶ್ ಮುಖ್ ಅವರ ಜಾಮೀನು ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ನಿರಾಕರಿಸಿದ ನಂತರ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡುವಂತೆ ಅವರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು.

 ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾದ ನಂತರ ಕಳೆದ ನವೆಂಬರ್ ನಿಂದ ಎನ್ ಸಿಪಿ ಮುಖಂಡರಾಗಿರುವ ಅನಿಲ್ ದೇಶ್ ಮುಖ್ ಜೈಲಿನಲ್ಲಿದ್ದಾರೆ.

SCROLL FOR NEXT