ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: 18 ವರ್ಷದ ಯುವತಿ ಅಪಹರಿಸಿ, ನಿರಂತರ ಅತ್ಯಾಚಾರ; ಇಬ್ಬರ ಬಂಧನ

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ 18 ವರ್ಷದ ಯುವತಿಯನ್ನು ಅಪಹರಿಸಿ, ಬಿಹಾರಕ್ಕೆ ಕರೆದೊಯ್ದು ಹಲವು ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ 18 ವರ್ಷದ ಯುವತಿಯನ್ನು ಅಪಹರಿಸಿ, ಬಿಹಾರಕ್ಕೆ ಕರೆದೊಯ್ದು ಹಲವು ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಯುವತಿಯನ್ನು ನವೆಂಬರ್ 11 ರಂದು ಗರ್ವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಿಂದ ಜೀತ್ ಬಿಂದ್ ಮತ್ತು ರಂಜೀತ್ ಕುಮಾರ್ ಅಪಹರಿಸಿದ್ದಾರೆ ಎಂದು ಸ್ಟೇಷನ್ ಹೌಸ್ ಆಫೀಸರ್ ರಾಜ್ ಕುಮಾರ್ ಸಿಂಗ್ ಹೇಳಿದ್ದಾರೆ.

18 ರಿಂದ 20 ವರ್ಷ ವಯಸ್ಸಿನ ಬಿಂದ್ ಮತ್ತು ಕುಮಾರ್ ಇಬ್ಬರನ್ನೂ ಭಾನುವಾರ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಹಿಳೆಯ ಸಹೋದರನ ದೂರಿನ ಮೇರೆಗೆ ನವೆಂಬರ್ 20 ರಂದು ಬಿಂದ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನವೆಂಬರ್ 26 ರಂದು ಮಹಿಳೆಯನ್ನು ಬಿಹಾರದಲ್ಲಿ ರಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬಿಂದ್ ಮತ್ತು ಕುಮಾರ್ ತನಗೆ ಮತ್ತು ಬರುವ ಔಷಧಿ ನೀಡಿ ಅಪಹರಿಸಿದ್ದಾರೆ ಮತ್ತು ನಂತರ ಬಿಹಾರದ ಹೋಟೆಲ್‌ಗೆ ಕರೆದೊಯ್ದರು. ಅಲ್ಲಿ ಅವರು 15 ದಿನಗಳ ಕಾಲ ತನ್ನ ಮೇಲೆ ನಿರಂತರ ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT