ದೇಶ

ಎಎಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಗುಜರಾತ್ ಚುನಾವಣಾ ಉಸ್ತುವಾರಿಯಾಗಿದ್ದ ಸಂದೀಪ್ ಪಾಠಕ್‌ ನೇಮಕ

Ramyashree GN

ನವದೆಹಲಿ: ಪಂಜಾಬ್ ಮತ್ತು ಗುಜರಾತ್‌ಗೆ ತನ್ನ ಚುನಾವಣಾ ಉಸ್ತುವಾರಿಯಾಗಿದ್ದ ಸಂದೀಪ್ ಪಾಠಕ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ (ಸಂಘಟನೆ) ಆಮ್ ಆದ್ಮಿ ಪಕ್ಷ (ಎಎಪಿ) ನೇಮಿಸಿದೆ. ಗುಜರಾತ್ ಚುನಾವಣೆ ಬಳಿಕ ಪಕ್ಷವು ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆ ಅರ್ಹವಾಗಿದೆ.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) 181 ಸ್ಥಾನಗಳ ಪೈಕಿ ಕೇವಲ ಐದು ಸ್ಥಾನಗಳನ್ನು ಗೆದ್ದಿದ್ದರೂ, ಅದು ಸುಮಾರು ಶೇ 13 ರಷ್ಟು ಮತಗಳನ್ನು ಗಳಿಸಿದೆ.

ಎಎಪಿ ಹೆಚ್ಚು ಸ್ಥಾನಗಳನ್ನು ಗೆದ್ದಿಲ್ಲ. ಆದರೆ, ಪಕ್ಷ ಪಡೆದ ಮತಗಳು ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯಲು ಸಹಾಯ ಮಾಡಿದೆ ಎಂದು ಕೇಜ್ರಿವಾಲ್ ಹೇಳಿದ್ದರು.

ರಾಜ್ಯಸಭಾ ಸದಸ್ಯರಾಗಿರುವ ಪಾಠಕ್ ಅವರು ಪಂಜಾಬ್ ಮತ್ತು ಗುಜರಾತ್‌ನ ಚುನಾವಣಾ ಉಸ್ತುವಾರಿಯಾಗಿದ್ದರು. ಅವರನ್ನು ಎಎಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಆಗಿ ನೇಮಿಸಿದೆ ಎಂದು ಪಕ್ಷದ ಮೂಲಗಳು ಮಂಗಳವಾರ ತಿಳಿಸಿವೆ.

SCROLL FOR NEXT