ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಗೋವಿಂದ ಕಾರಜೋಳ 
ದೇಶ

ಕೇಂದ್ರ ಜಲಶಕ್ತಿ ಸಚಿವ ಶೇಖಾವತ್, ಗೋವಿಂದ ಕಾರಜೋಳ ಭೇಟಿ: ರಾಜ್ಯದ ನೀರಾವರಿ ಯೋಜನೆಗಳ ಅನುಮೋದನೆಗೆ ಕೋರಿಕೆ

ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಂದು ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು  ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು.

ನವದೆಹಲಿ: ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಂದು ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು  ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು.

ಶೇಖವತ್ ಅವರ ನಿವಾಸದಲ್ಲಿ  ಇಂದು ಮುಂಜಾನೆ ಈ ಮಹತ್ವದ  ಸಭೆ ನಡೆಯಿತು. ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಕುರಿತು ಮಹತ್ವದ ಚರ್ಚೆ ನಡೆಯಿತು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಅನುಮೋದನೆ ನೀಡುವಂತೆ ಕೋರಲಾಯಿತು.
 
ಭದ್ರ ಮೇಲ್ದಂಡೆ ಯೋಜನೆಯ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು ಈ ಯೋಜನೆಗೆ ಮುಂದಿನ ಕೇಂದ್ರ ಸಚಿವ ಸಂಪುಟದ  ಸಭೆಯಲ್ಲಿ ಅನುಮೋದನೆ ದೊರೆಯುವ ವಿಶ್ವಾಸವಿದೆಯೆಂದು  ಗೋವಿಂದ್ ಕಾರಜೋಳ  ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಹದಾಯಿ ಯೋಜನೆಗೆ ಅನುಮೋದನೆ ಆದಷ್ಟು ಬೇಗ ದೊರಕುವ ನಿರೀಕ್ಷೆ ಇದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!