ಪ್ರಾತಿನಿಧಿಕ ಚಿತ್ರ 
ದೇಶ

ತಮಿಳುನಾಡು: ನಾಲ್ಕು ಮಕ್ಕಳು, ಪತ್ನಿಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ತಾಲೂಕಿನಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ನಾಲ್ವರು ಮಕ್ಕಳನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ತಿರುವಣ್ಣಾಮಲೈ: ಜಿಲ್ಲೆಯ ಚೆಂಗಂ ತಾಲೂಕಿನಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ನಾಲ್ವರು ಮಕ್ಕಳನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸುಮಾರು 9 ವರ್ಷದ ಮತ್ತೊಬ್ಬ ಮಗಳು ಕತ್ತರಿಸಿದ ಗಾಯಗಳೊಂದಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ವ್ಯಕ್ತಿಯನ್ನು ಜಿಲ್ಲೆಯ ಚೆಂಗಂ ಬಳಿಯ ಒಂರಂತವಾಡಿ ಗ್ರಾಮದ ರೈತ ಕಾರ್ಮಿಕ ಪಳನಿಸಾಮಿ (45) ಎಂದು ಗುರುತಿಸಲಾಗಿದೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅನುಮಾನಗೊಂಡ ನೆರೆಹೊರೆಯವರು ಇಂದು ಮಾಹಿತಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಳನಿಸ್ವಾಮಿ ಛಾವಣಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದ್ದು, ಅವರ 37 ವರ್ಷದ ಪತ್ನಿ, 3 ಪುತ್ರಿಯರು ಮತ್ತು ಒಬ್ಬ ಪುತ್ರ ಶವವಾಗಿ ಪತ್ತೆಯಾಗಿದ್ದಾರೆ. ಸುಮಾರು 9 ವರ್ಷ ವಯಸ್ಸಿನ ಇನ್ನೊಂದು ಹೆಣ್ಣು ಮಗುವನ್ನು ಜಿಎಚ್‌ಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT