ಆ್ಯಸಿಡ್ ದಾಳಿ ದೃಶ್ಯ ಸಿಸಿಟಿವಿಯಲ್ಲಿ ಸೆರೆ 
ದೇಶ

ದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಆಸಿಡ್ ದಾಳಿ, ಓರ್ವನ ಬಂಧನ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮೋಟಾರ್ ಬೈಕ್ ನಲ್ಲಿ ಬಂದ ಅಪರಿಚಿತರು 17 ವರ್ಷದ  ಅಪ್ರಾಪ್ತ ಬಾಲಕಿಯ ಮೇಲೆ ಆ್ಯಸಿಡ್ ದಾಳಿ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ನವದೆಹಲಿ: ಮೋಟಾರ್ ಬೈಕ್ ನಲ್ಲಿ ಬಂದ ಅಪರಿಚಿತರು 17 ವರ್ಷದ  ಅಪ್ರಾಪ್ತ ಬಾಲಕಿಯ ಮೇಲೆ ಆ್ಯಸಿಡ್ ದಾಳಿ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಶಾಲಾ ಬಾಲಕಿಯ ಮೇಲೆ ದುಷ್ಕರ್ಮಿ ಆ್ಯಸಿಡ್ ಎರಚಿದ ಘಟನೆ ನಡೆದಿದೆ. ಬಾಲಕಿಯು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಇಬ್ಬರು ಕಿರಾತಕರು ಬೈಕ್‍ನಲ್ಲಿ ಬಂದಿದ್ದಾರೆ. ಈ ವೇಳೆ ಹಿಂದೆ ಕುಳಿತಿದ್ದ ಕಿರಾತಕ ಬಾಲಕಿಯ ಮುಖದ ಮೇಳೆ ಆ್ಯಸಿಡ್ ಎರಚಿದ್ದಾನೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದ್ದು, ತೀವ್ರ ಗಾಯಗೊಂಡ ಆ್ಯಸಿಡ್ ಸಂತ್ರಸ್ತೆಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಮತ್ತು ಡಿಸಿಪಿ ದ್ವಾರಕಾ ಆಸ್ಪತ್ರೆಗೆ ಹೋಗಿದ್ದು, ಬಾಲಕಿಯ ಕುಟುಂಬಸ್ಥರೊಂದಿಗೆ ಮಾತನಾಡಿದ್ದಾರೆ. ಪ್ರಾಥಮಿಕ ವರದಿ ಪ್ರಕಾರ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ.

ಘಟನೆಯ ವೇಳೆ ಸಂತ್ರಸ್ತ ಬಾಲಕಿ ತನ್ನ ತಂಗಿಯೊಂದಿಗೆ ಇದ್ದಳು ಎಂದು ಅಧಿಕಾರಿಗಳು ಹೇಳಿದ್ದಾರೆ. "ತಮಗೆ ತಿಳಿದಿರುವ ಇಬ್ಬರು ವ್ಯಕ್ತಿಗಳ ಮೇಲೆ ಅವಳು ಅನುಮಾನ ವ್ಯಕ್ತಪಡಿಸಿದ್ದಾಳೆ. ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್