ದೇಶ

ಭ್ರಷ್ಟಾಚಾರ ತಗ್ಗಿಸಲು ದೆಹಲಿಯ ಎಲ್ಲಾ ಸಬ್ ರಿಜಿಸ್ಟ್ರಾರ್‌ ಹುದ್ದೆಗೆ ಮಹಿಳೆಯರ ನೇಮಕ

Lingaraj Badiger

ನವದೆಹಲಿ: ಭ್ರಷ್ಟಾಚಾರ, ವಿಳಂಬ ಮತ್ತು ಕಚೇರಿಗಳಲ್ಲಿ ಸಾಮಾನ್ಯ ಜನರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು  ದೆಹಲಿಯ ಎಲ್ಲಾ ಸಬ್ ರಿಜಿಸ್ಟ್ರಾರ್‌ ಹುದ್ದೆಗಳಿಗೆ ಮಹಿಳೆಯರನ್ನು ಮಾತ್ರ ನೇಮಕ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರಿಗೆ ಸೂಚಿಸಿದ್ದಾರೆ.

ಈ ಕ್ರಮದಿಂದಾಗಿ ಮೊದಲ ಬಾರಿಗೆ ದೆಹಲಿ ಸರ್ಕಾರದ ಕಂದಾಯ ಇಲಾಖೆಯಲ್ಲಿರುವ ಎಲ್ಲಾ 22 ಸಬ್-ರಿಜಿಸ್ಟ್ರಾರ್‌ಗಳು(ಎಸ್‌ಆರ್‌ಗಳು) ಮಹಿಳಾ ಅಧಿಕಾರಿಗಳೇ ಆಗಿರಲಿದ್ದಾರೆ.

ಮಹಿಳಾ ಅಧಿಕಾರಿಗಳು ಸಬ್ ರಿಜಿಸ್ಟ್ರಾರ್‌ ಕಚೇರಿಯ ಚುಕ್ಕಾಣಿ ಹಿಡಿಯುವ ಮೂಲಕ "ಪ್ರಚಲಿತ ಭ್ರಷ್ಟಾಚಾರ, ವಿಳಂಬ ಮತ್ತು ಕಚೇರಿಗಳಲ್ಲಿ ಜನರಿಗೆ ಆಗುತ್ತಿರುವ ಕಿರುಕುಳವನ್ನು ತಗ್ಗಿಸಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಅಧಿಕಾರ ವಹಿಸಿಕೊಂಡ ನಂತರ, ಸಕ್ಸೆನಾ ಅವರು ಸರ್ಕಾರಿ ಸೇವೆಗಳಲ್ಲಿ ಮಹಿಳೆಯರನ್ನು ಮಹತ್ವದ ಸ್ಥಾನಗಳಿಗೆ ನೇಮಕ ಮಾಡುವ ಮೂಲಕ ಅವರನ್ನು ಸಬಲೀಕರಣಗೊಳಿಸುವ ಉದ್ದೇಶ ಹೊಂದಿದ್ದು, ದೆಹಲಿ ಸರ್ಕಾರದ ಕಂದಾಯ ಇಲಾಖೆಯ ಉಪ-ರಿಜಿಸ್ಟ್ರಾರ್ ಕಚೇರಿಗಳ ಚುಕ್ಕಾಣಿಯನ್ನು ಮಹಿಳಾ ಅಧಿಕಾರಿಗಳಿಗೆ ನೀಡಿದ್ದಾರೆ.

SCROLL FOR NEXT