ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೀಪಿಕಾ 'ಬೇಷರಂ' ಹಾಡಿಗೆ ಮಧ್ಯ ಪ್ರದೇಶ ಗೃಹ ಸಚಿವ ಕಿಡಿ, ಪಠಾಣ್ ಚಿತ್ರ ನಿಷೇಧಿಸುವ ಎಚ್ಚರಿಕೆ

ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಪಠಾಣ್ ಚಿತ್ರದ 'ಬೇಷರಂ ರಂಗ್' ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರ ಬಟ್ಟೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮಧ್ಯ ಪ್ರದೇಶದಲ್ಲಿ ಪಠಾಣ್ ಚಿತ್ರಕ್ಕೆ ನಿಷೇಧ...

'ಬೇಷರಂ' ಹಾಡಿನ ಚಿತ್ರಗಳು
Lingaraj Badiger
Updated On : 14 Dec 2022, 5:40 pm

ಭೋಪಾಲ್: ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಪಠಾಣ್ ಚಿತ್ರದ 'ಬೇಷರಂ ರಂಗ್' ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರ ಬಟ್ಟೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮಧ್ಯ ಪ್ರದೇಶದಲ್ಲಿ ಪಠಾಣ್ ಚಿತ್ರಕ್ಕೆ ನಿಷೇಧ ವಿಧಿಸುವ ಎಚ್ಚರಿಕೆಯನ್ನು ಮಿಶ್ರಾ ನೀಡಿದ್ದಾರೆ.

ಬಹುನಿರೀಕ್ಷಿತ ಪಠಾಣ್‌ ಚಿತ್ರದ ಮೊದಲ ಹಾಡನ್ನು ಚಿತ್ರತಂಡ ಸೋಮವಾರ ಬೆಳಗ್ಗೆ ಬಿಡುಗಡೆ ಮಾಡಿದ್ದು, 
ಬೇಶರಂ ರಂಗ್ ಎಂಬ ಶೀರ್ಷಿಕೆಯ ಪೆಪ್ಪಿ ಡ್ಯಾನ್ಸ್‌ನಲ್ಲಿ ಚಿತ್ರದ ನಾಯಕ ಶಾರುಖ್ ಖಾನ್ ಮತ್ತು ನಾಯಕಿ ದೀಪಿಕಾ ಪಡುಕೋಣೆ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

PHOTOS: ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಬಾಯ್ಕಾಟ್ ಬಾಲಿವುಡ್ ಟ್ರೆಂಡ್, ದೀಪಿಕಾ ಕೇಸರಿ ಬಿಕಿನಿಗೆ ತಕರಾರು

Advertisement

Advertisement

ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಟ್ಟೆ ಧರಿಸಿರುವ ಬಗ್ಗೆ ಕಿಡಿಕಾರಿದ ಮಧ್ಯ ಪ್ರದೇಶ ಗೃಹ ಸಚಿವರು, ಚಿತ್ರದಲ್ಲಿ ಕೆಲವು ಆಕ್ಷೇಪಾರ್ಹ ದೃಶ್ಯಗಳಿದ್ದು, ಅವುಗಳನ್ನು ಬದಲಾಯಿಸದಿದ್ದರೆ ಮಧ್ಯ ಪ್ರದೇಶದಲ್ಲಿ ಪಠಾಣ್ ಚಿತ್ರವನ್ನು ನಿಷೇಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: 'ಪಠಾಣ್‌' ಸಿನಿಮಾದ ಬೇಷರಮ್‌ ರಂಗ್‌ ಹಾಡಿನಲ್ಲಿ ಮೈ ಚಳಿ ಬಿಟ್ಟು ಕುಣಿದ ದೀಪಿಕಾ-ಶಾರುಖ್!

ಇನ್ನು ಸಾಮಾಜಿಕ ಮಾಧ್ಯದಲ್ಲಿ ‘ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿ ಬೇಷರಮ್​ ರಂಗ್​ (ನಾಚಿಕೆಯಿಲ್ಲದ ಬಣ್ಣ) ಎಂದಿರುವುದು ಸರಿಯಲ್ಲ’ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments