ದೇಶ

2024ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ: ಕಾಂಗ್ರೆಸ್ ನಾಯಕ

Lingaraj Badiger

ಅಮೇಥಿ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಬುಧವಾರ ಹೇಳಿದ್ದಾರೆ.
  
ಅಮೇಥಿಯ ಜನತೆ ರಾಹುಲ್ ಗಾಂಧಿ ಅವರನ್ನು ಮತ್ತೊಮ್ಮೆ ಸಂಸದರಾಗಿ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಮಾಡುವ ಮೂಲಕ ದೆಹಲಿಗೆ ಕಳುಹಿಸಬೇಕು ಎಂದು ರೈ ಮನವಿ ಮಾಡಿದ್ದಾರೆ.

"ಗಾಂಧಿ-ನೆಹರೂ ಕುಟುಂಬ ಅಮೇಥಿಯೊಂದಿಗೆ ಹಳೆಯ ಸಂಬಂಧವನ್ನು ಹೊಂದಿದೆ... ಅದನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ರಾಹುಲ್ ಗಾಂಧಿ 2024 ರಲ್ಲಿ ಮತ್ತೆ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ" ಎಂದು ರೈ ಅಮೇಥಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಿಂದ ಮತ್ತೆ ಸ್ಪರ್ಧಿಸುವ ಬಗ್ಗೆ ಪಕ್ಷದಿಂದ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಸತತ ಮೂರು ಬಾರಿ ಅಮೇಥಿ ಸಂಸದರಾಗಿದ್ದ ರಾಹುಲ್ ಗಾಂಧಿ, 2019 ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ವಿರುದ್ಧ ಸೋಲು ಅನುಭವಿಸಿದ್ದರು.

ರಾಹುಲ್ ಗಾಂಧಿ ಪ್ರಸ್ತುತ ಲೋಕಸಭೆಯಲ್ಲಿ ಕೇರಳದ ವಯನಾಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ರಾಹುಲ್ ಗಾಂಧಿ ಅವರ ಪೋಷಕರಾದ ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಈ ಹಿಂದೆ ಅಮೇಥಿಯಿಂದ ಗೆದ್ದಿದ್ದರು.

SCROLL FOR NEXT