ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: 8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆಗೈದ ಅಪ್ರಾಪ್ತನ ಬಂಧನ

ಛತ್ತೀಸ್‌ಗಢದ ರಾಯ್‌ಪುರದಲ್ಲಿ 8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪದ ಮೇಲೆ ಹದಿಹರೆಯದ ಹುಡುಗನನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ರಾಯ್‌ಪುರ: ಛತ್ತೀಸ್‌ಗಢದ ರಾಯ್‌ಪುರದಲ್ಲಿ 8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪದ ಮೇಲೆ ಹದಿಹರೆಯದ ಹುಡುಗನನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಡಿಸೆಂಬರ್ 7 ರಂದು ಬಾಲಕಿ ನಾಪತ್ತೆಯಾಗಿದ್ದಳು, ನಂತರ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು ಎಂದು ಅವರು ಹೇಳಿದ್ದಾರೆ.

ಬಳಿಕ ಡಿಸೆಂಬರ್ 13 ರಂದು ಸದ್ದು ಪ್ರದೇಶದ ಖಾಲಿ ಜಾಗದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ ಮತ್ತು ಕೊಲ್ಲುವ ಮೊದಲು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು  ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ ಎಂದು ರಾಯ್‌ಪುರದ ಹಿರಿಯ ಪೊಲೀಸ್ ಅಧೀಕ್ಷಕ ಪ್ರಶಾಂತ್ ಅಗರವಾಲ್ ಹೇಳಿದ್ದಾರೆ.

"ಹುಡುಗಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಂದ ಆರೋಪದ ಮೇಲೆ ನಾವು 14 ವರ್ಷದ ಬಾಲಕನನ್ನು ಬಂಧಿಸಿದ್ದೇವೆ. ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಬಾಲಕನನ್ನು ವಶಕ್ಕೆ ಪಡೆದಿದ್ದೇವೆ. ವಿಚಾರಣೆಯ ಸಮಯದಲ್ಲಿ ಆರೋಪಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ" ಎಂದು ಎಸ್ಎಸ್ಪಿ ತಿಳಿಸಿದ್ದಾರೆ.

ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ 302 (ಕೊಲೆ), 363 (ಅಪಹರಣ), 376 (ಅತ್ಯಾಚಾರ) ಮತ್ತು 201 (ಸಾಕ್ಷ್ಯ ನಾಶ) ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಅಡಿ ಕೇಸ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT