ಸಂಗ್ರಹ ಚಿತ್ರ 
ದೇಶ

ಉ.ಪ್ರದೇಶ: ಹಳಿ ಮೇಲೆ ವಿಡಿಯೋ ಮಾಡುತ್ತಿದ್ದವರ ಮೇಲೆ ಹರಿದ ರೈಲು, ದಂಪತಿ ಸೇರಿ ಮೂವರ ಸಾವು!

ರೈಲ್ವೇ ಹಳಿ ಮೇಲೆ ವಿಡಿಯೋ ಮಾಡುತ್ತಿದ್ದ ವೇಳೆ ರೈಲು ಹರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಘಟನೆಯಲ್ಲಿ ದಂಪತಿ ಸೇರಿ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಗಾಜಿಯಾಬಾದ್‌: ರೈಲ್ವೇ ಹಳಿ ಮೇಲೆ ವಿಡಿಯೋ ಮಾಡುತ್ತಿದ್ದ ವೇಳೆ ರೈಲು ಹರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಘಟನೆಯಲ್ಲಿ ದಂಪತಿ ಸೇರಿ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಗಾಜಿಯಾಬಾದ್‌ನ ರೈಲ್ವೆ ಹಳಿಯಲ್ಲಿ "ಮೊಬೈಲ್ ಫೋನ್‌ಗಳಲ್ಲಿ ವೀಡಿಯೊ" ಮಾಡುತ್ತಿದ್ದಾಗ ವೇಗವಾಗಿ ಬಂದ ರೈಲು ದಂಪತಿ ಸೇರಿದಂತೆ ಮೂವರ ಮೇಲೆ ಹರಿದಿದೆ. ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಮಸೂರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲೂ ಗರ್ಹಿ ರೈಲ್ವೆ ಕ್ರಾಸಿಂಗ್ ಬಳಿ ಈ ಘಟನೆ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ಸಮಯದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಲು ಅವರು ತಮ್ಮ ಮೊಬೈಲ್ ಫೋನ್‌ಗಳಿಂದ ವೀಡಿಯೊಗಳನ್ನು ಮಾಡುತ್ತಿದ್ದರು. ಅವರು ವೀಡಿಯೊ ಚಿತ್ರೀಕರಣದಲ್ಲಿ ಎಷ್ಟು ತಲ್ಲೀನರಾಗಿದ್ದರು ಎಂದರೆ ಹಳೆ ದೆಹಲಿಯಿಂದ ಪ್ರತಾಪ್‌ಗಢ ಜಂಕ್ಷನ್‌ಗೆ ಹೋಗುವ ಪದ್ಮಾವತ್ ಎಕ್ಸ್‌ಪ್ರೆಸ್ ಪ್ಯಾಸೆಂಜರ್ ರೈಲು ತಮ್ಮ ದಾರಿಯಲ್ಲಿ ಬರುತ್ತಿರುವುದನ್ನು ಗಮನಿಸಲಿಲ್ಲ. ರೈಲಿನ ಶಬ್ದವನ್ನು ಕೂಡ ಕೇಳಿಕೊಳ್ಳದ ರೀತಿಯಲ್ಲಿ ಅವರು ವಿಡಿಯೋ ಮಾಡುವುದರಲ್ಲಿ ಮಗ್ನರಾಗಿದ್ದರು. ಹೀಗಾಗಿ ವೇಗವಾಗಿ ಬಂದ ರೈಲು ಮೂವರ ಮೇಲೆ ಹರಿದಿದೆ ಎಂದು ಪೊಲೀಸ್ ಉಪ ಆಯುಕ್ತ (ಗ್ರಾಮೀಣ) ಇರಾಜ್ ರಾಜಾ ಹೇಳಿದ್ದಾರೆ.

ಮೃತರನ್ನು ಮಸೂರಿ ಪೊಲೀಸ್ ಠಾಣೆ ವ್ಯಾಪ್ತಿಯ ಮುಶಾಹಿದ್ ಕಾಲೋನಿಯ ನದೀಮ್ (23 ವರ್ಷ), ಅವರ ಪತ್ನಿ ಜೈನಾಬ್ (20 ವರ್ಷ) ಮತ್ತು ಶಕೀಲ್ (30 ವರ್ಷ) ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT