ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ನೆರೆ ಮನೆಯ ಮಹಿಳೆಯ ಹತ್ಯೆ!
ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ವ್ಯಕ್ತಿಯೋರ್ವ ನೆರೆ ಮನೆಯ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಮುಂಬೈ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ವ್ಯಕ್ತಿಯೋರ್ವ ನೆರೆ ಮನೆಯ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಡೊಂಬಿವಿಲಿ ಪ್ರದೇಶದಲ್ಲಿ ಈ ಅಪರಾಧ ಕೃತ್ಯ ವರದಿಯಾಗಿದ್ದು, ವೈಶಾಲಿ ಮಸೂದ್ ಸಂತ್ರಸ್ತ ಮಹಿಳೆಯಾಗಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಾನ್ಪಾಡಾ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಅಂತರ್ಧರ್ಮೀಯ ವಿವಾಹ ಮಾಹಿತಿ ಸಂಗ್ರಹಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ಸಮಿತಿ ರಚನೆ: ಶ್ರದ್ಧಾ ರೀತಿಯ ಪ್ರಕರಣಗಳ ತಡೆಗೆ ಈ ಕ್ರಮ ಎಂದ ಸರ್ಕಾರ
ಆರೋಪಿ ವೈಶಾಲಿ ಮಸೂದ್ ಅವರಿಂದ ಆಗಾಗ್ಗೆ ಹಣ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಆದರೆ ಬುಧವಾರ (ಡಿ.14 ರಂದು) ವೈಶಾಲಿ ಹಣ ನೀಡಲು ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ವ್ಯಕ್ತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.