ರಾಹುಲ್ ಗಾಂಧಿ 
ದೇಶ

ಚೀನಾ ಯುದ್ಧ ತಯಾರಿ ನಡೆಸ್ತಿದೆ; ನಮ್ಮ ಯೋಧರಿಗೆ ಪೆಟ್ಟು ಬೀಳುತ್ತಿದೆ. ಆದರೆ ನಮ್ಮ ಸರ್ಕಾರ ನಿದ್ರಿಸುತ್ತಿದೆ: ರಾಹುಲ್

'ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಅದನ್ನು ಒಪ್ಪಿಕೊಳ್ಳುತ್ತಿಲ್ಲ' ಎಂದು ರಾಹುಲ್ ಹೇಳಿದರು.

ನವದೆಹಲಿ: 'ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಅದನ್ನು ಒಪ್ಪಿಕೊಳ್ಳುತ್ತಿಲ್ಲ' ಎಂದು ರಾಹುಲ್ ಹೇಳಿದರು.

ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ(ಭಾರತ-ಚೀನಾ ತವಾಂಗ್ ಘರ್ಷಣೆ) ಉಭಯ ದೇಶಗಳ ಸೈನಿಕರು ಮುಖಾಮುಖಿಯಾದ ಘಟನೆಗಳ ನಂತರ ರಾಹುಲ್ ಗಾಂಧಿ ಈ ವಿಷಯಗಳನ್ನು ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿರುವ ರಾಹುಲ್ ಗಾಂಧಿ, 'ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ. ಅತಿಕ್ರಮಣಕ್ಕೆ ಅಲ್ಲ. ಅವರ ಅಸ್ತ್ರಗಳ ಮಾದರಿ ನೋಡಿ. ಅವರು ಯುದ್ಧಕ್ಕೆ ತಯಾರಿ ನಡೆಸುತ್ತಿದ್ದಾರೆ. ಆದರೆ ಇದನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ಭಾರತ ಸರ್ಕಾರ ಅಲ್ಲ. ಕಾರ್ಯತಂತ್ರದ ಮೇಲೆ ಕೆಲಸ, ಆದರೆ ಘಟನೆಗಳ ಮೇಲೆ ಕೆಲಸ.

ಚೀನಾ ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದೆ. ಚೀನಿ ಯೋಧರು ನಮ್ಮ ಯೋಧರಿಗೆ ಹೊಡೆಯುತ್ತಿದ್ದಾರೆ. ಇದರಿಂದ ಚೀನಾದ ಬೆದರಿಕೆ ನಮಗೆ ಸ್ಪಷ್ಟವಾಗಿ ತಿಳಿಯುತ್ತಿದೆ. ಆದರೆ ಸರ್ಕಾರ ಅದನ್ನು ನಿರ್ಲಕ್ಷಿಸುತ್ತಿದೆ. ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾ ದಾಳಿಗೆ ತಯಾರಿ ನಡೆಸುತ್ತಿದೆ. ಭಾರತ ಸರ್ಕಾರ ನಿದ್ದೆ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು. ರಾಜಸ್ಥಾನದ ದೌಸಾದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ 'ಭಾರತ್ ಜೋಡೋ ಯಾತ್ರೆ'ಯ ವೇದಿಕೆಯಲ್ಲಿ ರಾಹುಲ್ ಗಾಂಧಿ ಈ ಮಾತುಗಳನ್ನಾಡಿದ್ದಾರೆ. 

ತವಾಂಗ್ ಘರ್ಷಣೆ ಬಗ್ಗೆ ಸರ್ಕಾರದ ಹೇಳಿಕೆಯ ನಂತರ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಕಳೆದ ವಾರ ಡಿಸೆಂಬರ್ 9ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ವಾಸ್ತವಿಕ ನಿಯಂತ್ರಣ ರೇಖೆ(ಎಲ್‌ಎಸಿ)ಯಲ್ಲಿ 'ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು' ಚೀನಾ ಪ್ರಯತ್ನಿಸಿದೆ ಎಂದು ಇತ್ತೀಚೆಗೆ ಸರ್ಕಾರ ಹೇಳಿತ್ತು. ಈ ವೇಳೆ ಎರಡೂ ಕಡೆಯ ಯೋಧರು ಮುಖಾಮುಖಿಯಾಗಿದ್ದು ಹಲವು ಗಾಯಗೊಂಡಿದ್ದಾರೆ. ಇನ್ನು ಚೀನಾದ ಯತ್ನವನ್ನು ಭಾರತೀಯ ಸೇನೆ ಯಶಸ್ವಿಯಾಗಿ ಹಿಮ್ಮೆಟ್ಟಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT