ಸಾಂದರ್ಭಿಕ ಚಿತ್ರ 
ದೇಶ

ಕೊಚ್ಚಿ: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು

ಇಬ್ಬರು ಯುವಕರು ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡ ದಾರುಣ ಘಟನೆ ಶುಕ್ರವಾರ ಕೊರಟ್ಟಿ ರೈಲು ನಿಲ್ದಾಣದಲ್ಲಿ ನಡೆದಿದೆ.

ಕೊಚ್ಚಿ: ಇಬ್ಬರು ಯುವಕರು ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡ ದಾರುಣ ಘಟನೆ ಶುಕ್ರವಾರ ಕೊರಟ್ಟಿ ರೈಲು ನಿಲ್ದಾಣದಲ್ಲಿ ನಡೆದಿದೆ.

ಮೃತಪಟ್ಟ ಯುವಕರನ್ನು ಕೊರಟ್ಟಿ ನಿವಾಸಿಗಳಾದ ಕೃಷ್ಣಕುಮಾರ್(17) ಮತ್ತು ಸಂಜಯ್ (16) ಎಂದು ಗುರುತಿಸಲಾಗಿದೆ.

ಕೊರಟ್ಟಿಯಲ್ಲಿ ಹೆಚ್ಚಿನ ರೈಲುಗಳು ನಿಲುಗಡೆಯಾಗದ ಕಾರಣ, ಇಂದು ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ನಡೆದ ಈ ಘಟನೆ ತಕ್ಷಣ ಗಮನಕ್ಕೆ ಬಂದಿಲ್ಲ. ಬೆಳಗ್ಗೆ 5 ಗಂಟೆಯ ಸುಮಾರಿಗೆ ಯುವಕರ ಶವಗಳು ಪತ್ತೆಯಾದ ನಂತರ ಘಟನೆ ಬೆಳಕಿಗೆ ಬಂದಿದೆ.

ಸ್ಥಳೀಯ ರೈಲು ನಿಲ್ದಾಣವಾಗಿರುವುದರಿಂದ, ಕೊರಟ್ಟಿಯಲ್ಲಿ ಹೆಚ್ಚಿನ ರೈಲುಗಳು ನಿಲ್ಲುವುದಿಲ್ಲ. ಆದರೆ ಕೆಲವೊಮ್ಮೆ, ರೈಲುಗಳು ನಿಧಾನವಾಗಿ ಚಲಿಸುತ್ತವೆ ಮತ್ತು ಕೆಲವು ಬಾರಿ ನಿಲ್ಲಿಸುತ್ತವೆ.

ಈ ಯುವಕರು ಚಲಿಸುತ್ತಿದ್ದ ರೈಲಿನಿಂದ ಕೊರಟ್ಟಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಜಿಗಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಯುವಕರಲ್ಲಿ ಒಬ್ಬರ ತಲೆಗೆ ತೀವ್ರ ಪೆಟ್ಟಾಗಿದ್ದು, ಮತ್ತೊಬ್ಬರು ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿಕೊಂಡಿದ್ದಾರೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

‘SIR ಹೆಸರಿನಲ್ಲಿ ಮುಸ್ಲಿಮರನ್ನು ಬಾಂಗ್ಲಾದೇಶ ನುಸುಳುಕೋರರೆಂದು ಬಿಂಬಿಸಬೇಡಿ’: ಮಾಜಿ ಮುಖ್ಯ ಚುನಾವಣಾ ಆಯುಕ್ತ S Y Quraishi

'ಅಸಹ್ಯಕರ' ಕೋರ್ಟ್‌ನ ಆತ್ಮಸಾಕ್ಷಿಗೆ ನೋವುಂಟಾಗಿದೆ: ಮೋದಿ ಪೋಸ್ಟರ್ ಪ್ರದರ್ಶಿಸಿದ್ದ ಬಂಗಾಳಿ ನಟಿಗೆ ಹೈಕೋರ್ಟ್‌ ತರಾಟೆ!

'ಜನರ ಬಳಿಗೇ ಸರ್ಕಾರ, ದೊರೆ ಎನ್ನಬೇಡಿ, ಸೇವಕ ಎನ್ನಿ': ಕರ್ನಾಟಕದಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ CM ಡಿಕೆ ಶಿವಕುಮಾರ್ ಚಾಲನೆ

ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್: ಇನ್ಮುಂದೆ ತಮ್ಮ ಹೆಸರಿಗೆ ಮೊದಲು 'Tr' ಬಳಸುವ ಅವಕಾಶ!