ಮನೆಗೆ ಆಕಸ್ಮಿಕ ಬೆಂಕಿ, ನಿದ್ರೆಯಲ್ಲಿದ್ದ ಆರು ಮಂದಿ ಸಜೀವ ದಹನ 
ದೇಶ

ತೆಲಂಗಾಣ: ಮನೆಗೆ ಆಕಸ್ಮಿಕ ಬೆಂಕಿ, ನಿದ್ರೆಯಲ್ಲಿದ್ದ ಆರು ಮಂದಿ ಸಜೀವ ದಹನ

ತೆಲಂಗಾಣದ ಮಂಚಯಾರ್ಲದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಒಂದೇ ಕುಟುಂಬ ಆರು ಮಂದಿ ಸಜೀವ ದಹನವಾಗಿದ್ದಾರೆ.

ತೆಲಂಗಾಣ: ತೆಲಂಗಾಣದ ಮಂಚಯಾರ್ಲದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಒಂದೇ ಕುಟುಂಬ ಆರು ಮಂದಿ ಸಜೀವ ದಹನವಾಗಿದ್ದಾರೆ.

ಮದ್ಯರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಮನೆ ಮಾಲೀಕ ಸೇರಿ ಒಂದೇ ಕುಟುಂಬದ ಆರು ಜನ ಸಜೀವ ದಹನವಾಗಿದ್ದಾರೆ. ಈ ಬೆಂಕಿ ಅವಘಡದಲ್ಲಿ ಮನೆ ಯಜಮಾನ ಶಿವಯ್ಯ (50), ಅವರ ಪತ್ನಿ ಪದ್ಮಾ (45), ಪದ್ಮಾ ಅವರ ಅಕ್ಕನ ಮಗಳು ಮೌನಿಕಾ (23) ಮತ್ತು ಆಕೆಯ ಇಬ್ಬರು ಪುತ್ರಿಯರು ಹಾಗು ಸಂಬಂಧಿ ಶಾಂತಯ್ಯ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಮೃತರಲ್ಲಿ ಸಿಂಗರೇಣಿ ಉದ್ಯೋಗಿ ಶಾಂತಯ್ಯ ಕೂಡ ಸೇರಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ಮನೆಯಲ್ಲಿದ್ದವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಮನೆಯಲ್ಲಿ ಹೊತ್ತಿದ್ದ ಬೆಂಕಿ ನೋಡಿ ಅಕ್ಕ ಪಕ್ಕದವರು ಪೊಲೀಸರಿಗೆ ಕರೆ ಮಾಡಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಮನೆ ಸಂಪೂರ್ಣ ಭಸ್ಮವಾಗಿ, ಕುಟುಂಬಸ್ಥರೆಲ್ಲಾ  ಸಜೀವದಹನವಾಗಿದ್ದರು.

ಪೊಲೀಸರು ರಕ್ಷಣಾ ಕ್ರಮ ಕೈಗೊಂಡಿದ್ದಾರೆ. ಡಿಸಿಪಿ ಅಖಿಲ್ ಮಹಾಜನ್ ದುರಂತದ ಹಿಂದಿರುವ ಕಾರಣಗಳ ಬಗ್ಗೆ ತಿಳಿಯಲು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ