ಪ್ರಾತಿನಿಧಿಕ ಚಿತ್ರ 
ದೇಶ

ಚಿಕ್ಕಪ್ಪನ ಬಗ್ಗೆ ಮಾಹಿತಿ ನೀಡಲಿಲ್ಲವೆಂದು 8 ತಿಂಗಳ ಗರ್ಭಿಣಿಯನ್ನು ಥಳಿಸಿ ಕೊಂದ ಗೂಂಡಾಗಳು, ದೂರು ದಾಖಲು

ಗರ್ಭಿಣಿಗೆ ಸ್ಥಳೀಯ ಗೂಂಡಾಗಳು ಥಳಿಸಿದ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡಿದ್ದು, ಶುಕ್ರವಾರ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಮೃತರನ್ನು 8 ತಿಂಗಳ ಗರ್ಭಿಣಿಯಾಗಿದ್ದ ಉಪಾಸನ ಎಂದು ಗುರುತಿಸಲಾಗಿದೆ.

ಜಲೌನ್: ಗರ್ಭಿಣಿಗೆ ಸ್ಥಳೀಯ ಗೂಂಡಾಗಳು ಥಳಿಸಿದ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡಿದ್ದು, ಶುಕ್ರವಾರ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಮೃತರನ್ನು 8 ತಿಂಗಳ ಗರ್ಭಿಣಿಯಾಗಿದ್ದ ಉಪಾಸನ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ತಮ್ಮ ಚಿಕ್ಕಪ್ಪನ ಬಗ್ಗೆ ಮಾಹಿತಿ ನೀಡಲಿಲ್ಲ ಎಂಬ ಕಾರಣಕ್ಕಾಗಿ ರೌಡಿಗಳು ಯುವಕ ಮತ್ತು ಆತನ ಹೆಂಡತಿಯನ್ನು ನಿರ್ದಯವಾಗಿ ಥಳಿಸಿದ್ದಾರೆ.

ಯುವಕನ ಮನೆಗೆ ಬಂದ ಆರೋಪಿಗಳಾದ ರವೀಂದ್ರ, ಮನಮೋಹನ್ ಮತ್ತು ಮನಮೋಹನ್ ಅವರ ಪುತ್ರ ಆದೇಶ್ ದಂಪತಿಯ ಮನೆಗೆ ಬಂದು ಅವರ ಚಿಕ್ಕಪ್ಪನನ್ನು ನಿಂದಿಸಲು ಮುಂದಾಗಿದ್ದಾರೆ. ಈ ಬಗ್ಗೆ ಸಂದೀಪ್ ಆಕ್ಷೇಪ ವ್ಯಕ್ತಪಡಿಸಿದಾಗ ಆರೋಪಿಗಳು ಅವರೊಂದಿಗೆ ಜಗಳಕ್ಕೆ ಮುಂದಾಗಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಜಲೌನ್ ಶೈಲೇಂದ್ರ ಬಾಜ್‌ಪೇಯ್ ಹೇಳಿದರು.

ಈ ವೇಳೆ ಸಂದೀಪ್ ಅವರ 8 ತಿಂಗಳ ಗರ್ಭಿಣಿಯಾಗಿದ್ದ ಪತ್ನಿ ಉಪಾಸನಾ ಜಗಳ ತಡೆಯಲು ಯತ್ನಿಸಿದ್ದಾರೆ. ಆದರೆ, ಆರೋಪಿಗಳು ಅವರನ್ನೂ ಥಳಿಸಿದ್ದಾರೆ. ಈ ವೇಳೆ ಅವರು ಮೂರ್ಛೆ ಹೋಗಿದ್ದಾರೆ. ಬಳಿಕ ಪತಿಯ ಕೂಗಾಟ ಕೇಳಿ ನೆರೆಹೊರೆಯವರು ಸಹಾಯಕ್ಕೆ ಧಾವಿಸಿದ್ದಾರೆ ಎಂದು ಅವರು ಹೇಳಿದರು.
ನೆರೆಹೊರೆಯವರು ವಿಡಿಯೋವನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಆರೋಪಿಗಳು ದೂರು ದಾಖಲಿಸಿದ್ದಾರೆ. ವಿಡಿಯೋ ನೋಡಿದ ನಂತರ ಪೊಲೀಸರು ಘಟನೆಯ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT