ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ಫಡ್ನವಿಸ್ 
ದೇಶ

ಮಹಾರಾಷ್ಟ್ರ ಸರ್ವಾಂಗೀಣ ಅಭಿವೃದ್ಧಿಗೆ ಫಡ್ನವೀಸ್ ಸಿಎಂ ಆಗಬೇಕು: ಮಹಾ ಬಿಜೆಪಿ ಅಧ್ಯಕ್ಷ

ತಾವು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿರುವವರೆಗೆ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಬೇಕು ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಅವರು ಭಾನುವಾರ ಹೇಳಿದ್ದಾರೆ.

ಮುಂಬೈ: ತಾವು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿರುವವರೆಗೆ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಬೇಕು ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಅವರು ಭಾನುವಾರ ಹೇಳಿದ್ದಾರೆ.

ಸದ್ಯ ಕ್ಯಾಬಿನೆಟ್ ಸಚಿವರಾಗಿರುವ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಫಡ್ನವಿಸ್ ಬದಲಿಗೆ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಪಕ್ಷ ಭಾರವಾದ ಹೃದಯದಿಂದ ನಿರ್ಧರಿಸಿದೆ ಎಂದು ಹೇಳಿದ ತಿಂಗಳುಗಳ ನಂತರ ಬವಾಂಕುಲೆ ಅವರು ಈ ಹೇಳಿಕೆ ನೀಡಿದ್ದಾರೆ.

ಬವಾಂಕುಲೆ ಅವರ ಈ ಹೇಳಿಕೆಯು ವಿರೋಧ ಪಕ್ಷಗಳ ಕೈಗೆ ಅಸ್ತ್ರ ನೀಡಿದ್ದು, ಪ್ರಸ್ತುತ ಸಿಎಂ ಏಕನಾಥ್ ಶಿಂಧೆಗೆ ಭಾರತೀಯ ಜನತಾ ಪಕ್ಷ ಯಾವುದೇ ಬೆಲೆ ನೀಡುತ್ತಿಲ್ಲ ಎಂಬುದನ್ನು ತೋರಿಸಿದೆ ಎಂದು ಎನ್ ಸಿಪಿ ಹೇಳಿದೆ.

ನಾಗ್ಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬವಾಂಕುಲೆ, "... ನಾನು ರಾಜ್ಯ ಘಟಕದ ಅಧ್ಯಕ್ಷ(ಬಿಜೆಪಿ) ಆಗಿರುವವರೆಗೂ ಫಡ್ನವಿಸ್ ಸಿಎಂ ಆಗಬೇಕು..." ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಸೇರಿ 150ಕ್ಕೂ ಹೆಚ್ಚು ಮಂದಿ ಪೊಲೀಸ್ ವಶ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!