ಸಾಂದರ್ಭಿಕ ಚಿತ್ರ 
ದೇಶ

ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿಯನ್ನು ಕೊಂದ ಕೇರಳದ ವ್ಯಕ್ತಿ ಜೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ತನ್ನೊಂದಿಗೆ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿಯನ್ನು ಕಡಿದು ಕೊಂದ ಆರೋಪಿಯೊಬ್ಬರು ಇಲ್ಲಿನ ಜಿಲ್ಲಾ ಕಾರಾಗೃಹದ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದ್ದಾರೆ.

ತಿರುವನಂತಪುರಂ: ಇಲ್ಲಿ ತನ್ನೊಂದಿಗೆ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿಯನ್ನು ಕಡಿದು ಕೊಂದ ಆರೋಪಿಯೊಬ್ಬರು ಇಲ್ಲಿನ ಜಿಲ್ಲಾ ಕಾರಾಗೃಹದ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದ್ದಾರೆ.

ರಾಕೇಶ್ (49) ಎಂಬುವವರು ಗುರುವಾರ ತನ್ನೊಂದಿಗೆ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಸಿಂಧು (48) ಎಂಬಾಕೆಯನ್ನು ಹಗಲು ಹೊತ್ತಿನಲ್ಲೇ ಜನದಟ್ಟಣೆಯ ರಸ್ತೆಯಲ್ಲಿ ಹೊಡೆದು ಕೊಂದಿದ್ದರು.

ಸಿಂಧು ಅವರ ಕುತ್ತಿಗೆ ಮತ್ತು ಕೈಗೆ ಹಲವು ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ ಪೊಲೀಸರು ರಾಕೇಶ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಬಂಧಿಸಿದ ತಕ್ಷಣ ಮಾನಸಿಕ ಅಸಮತೋಲನ ಪ್ರದರ್ಶಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರಾಕೇಶ್ ಮತ್ತು ಸಿಂಧು ಇಬ್ಬರಿಗೂ ಈ ಮೊದಲೇ ಮದುವೆಯಾಗಿತ್ತು ಮತ್ತು ಸ್ಥಳೀಯ ಶಾಲೆಯಲ್ಲಿ ಸಹಪಾಠಿಗಳಾಗಿದ್ದರು. ಅವರು ಕಳೆದ 12 ವರ್ಷಗಳಿಂದ ಒಟ್ಟಿಗೆ ವಾಸಿಸುತ್ತಿದ್ದರು. ಇತ್ತೀಚೆಗಷ್ಟೇ ರಾಕೇಶ್ ಸಿಂಧುವಿನಿಂದ ದೂರವಾಗಿದ್ದು, ಆಕೆ ತನ್ನ ಸಹೋದರಿಯೊಂದಿಗೆ ವಾಸವಿದ್ದು, ರಾಕೇಶ್ ಒಂಟಿಯಾಗಿ ವಾಸವಾಗಿದ್ದ.

ರಾಕೇಶ್ ಮಾನಸಿಕ ಅಸ್ವಸ್ಥನಂತೆ ಕಂಡಿದ್ದರೂ ಜೈಲಿನಲ್ಲಿ ಸೂಕ್ತ ಭದ್ರತೆಯನ್ನು ಏಕೆ ನೀಡಿಲ್ಲ ಎಂಬ ಪ್ರಶ್ನೆಗಳು ಇದೀಗ ಎದ್ದಿವೆ. ರಾಕೇಶ್ ಅವರನ್ನು ಕಸ್ಟಡಿಗೆ ತೆಗೆದುಕೊಂಡಾಗಿನಿಂದ ಮಾನಸಿಕ ಅಸಮತೋಲನವನ್ನು ತೋರಿಸುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಆಗ ಜೈಲು ಅಧಿಕಾರಿಗಳು ಆತನ ಬಗ್ಗೆ ಏಕೆ ನಿರ್ದಾಕ್ಷಿಣ್ಯರಾಗಿದ್ದರು. ಅಂತಹ ಜನರು ಆತ್ಮಹತ್ಯೆ ಮತ್ತು ಇತರ ಕೃತ್ಯಗಳಿಗೆ ಗುರಿಯಾಗುವುದರಿಂದ ಖೈದಿಯ ಮೇಲೆ ಗಮನ ಹರಿಸಬೇಕಿತ್ತು ಎಂದು ಹೆಸರು ಹೇಳಲು ಇಚ್ಛಿಸದ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT