ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ತಲೆಗೆ 12 ಲಕ್ಷ ರೂ. ಬಹುಮಾನ ಹೊಂದಿದ್ದ ಮಾವೋವಾದಿ ಎನ್‌ಕೌಂಟರ್‌ಗೆ ಬಲಿ

ತನ್ನ ತಲೆಗೆ 12 ಲಕ್ಷ ರೂಪಾಯಿ ಬಹುಮಾನ ಹೊಂದಿದ್ದ ಮತ್ತು ಕನಿಷ್ಠ ಮೂರು ರಾಜ್ಯಗಳಲ್ಲಿ ಬೇಕಾಗಿದ್ದ ಮಾವೋವಾದಿಯನ್ನು ಮಧ್ಯ ಪ್ರದೇಶದ ಬಾಲಾಘಾಟ್ ಜಿಲ್ಲೆಯ ಅರಣ್ಯದಲ್ಲಿ ಪೊಲೀಸರು ಭಾನುವಾರ...

ಬಾಲಾಘಾಟ್: ತನ್ನ ತಲೆಗೆ 12 ಲಕ್ಷ ರೂಪಾಯಿ ಬಹುಮಾನ ಹೊಂದಿದ್ದ ಮತ್ತು ಕನಿಷ್ಠ ಮೂರು ರಾಜ್ಯಗಳಲ್ಲಿ ಬೇಕಾಗಿದ್ದ ಮಾವೋವಾದಿಯನ್ನು ಮಧ್ಯ ಪ್ರದೇಶದ ಬಾಲಾಘಾಟ್ ಜಿಲ್ಲೆಯ ಅರಣ್ಯದಲ್ಲಿ ಪೊಲೀಸರು ಭಾನುವಾರ ಎನ್‌ಕೌಂಟರ್‌ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾವೋವಾದಿಗಳು ಮತ್ತು ಹಾಕ್ ಫೋರ್ಸ್ ಸಿಬ್ಬಂದಿಗಳ ನಡುವೆ ಎನ್‌ಕೌಂಟರ್ ನಡೆದಿದ್ದು, ಮಾವೋವಾದಿಗಳ ಸುಳಿವಿನ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ ರೂಪ್‌ಜರ್ ಪೊಲೀಸ್ ಠಾಣಾ ವ್ಯಾಪ್ತಿಯ ಹರಟೋಲಾ ಅರಣ್ಯದಲ್ಲಿ ಇಂದು ಬೆಳಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು ಎಂದು ಪೊಲೀಸ್ ಮಹಾ ನಿರ್ದೇಶಕ ಸಂಜಯ್ ಸಿಂಗ್ ಹೇಳಿದ್ದಾರೆ.

ಮಾವೋವಾದಿಗೆ ಶರಣಾಗುವಂತೆ ಸೂಚಿಸಲಾಯಿತು. ಆದರೆ ಇದಕ್ಕೆ ಒಪ್ಪದ ಮಾವೋವಾದಿ ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದರು. ಹೀಗಾಗಿ ಎನ್ ಕೌಂಟರ್ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.

ಹತ್ಯೆಯಾದ ಮಾವೋವಾದಿಯನ್ನು ಭೋರಮ್‌ದೇವ್ ದಲಂ ಸದಸ್ಯ ರೂಪೇಶ್ ಅಲಿಯಾಸ್ ಹೂಂಗಾ ಎಂದು ಗುರುತಿಸಲಾಗಿದೆ.

ಹೂಂಗಾ ತಲೆಗೆ 12 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಮಹಾರಾಷ್ಟ್ರ, ಮಧ್ಯ ಪ್ರದೇಶ ಮತ್ತು ಛತ್ತೀಸ್‌ಗಢದ ಪೊಲೀಸರಿಗೆ ಬೇಕಾಗಿದ್ದ ಎಂದು ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT