ದೇಶ

ಉದ್ಧವ್ ಠಾಕ್ರೆ ಮಹಾ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ: ಅಜಿತ್ ಪವಾರ್

Lingaraj Badiger

ಮುಂಬೈ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಮತ್ತು ಎಂಎಲ್‌ಸಿ ಉದ್ಧವ್ ಠಾಕ್ರೆ ಅವರು ಸೋಮವಾರ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು ಭಾನುವಾರ ತಿಳಿಸಿದ್ದಾರೆ.

ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣದ ಮುಖ್ಯಸ್ಥರಾಗಿರುವ ಠಾಕ್ರೆ ಅವರು ಮುಂಬೈನಲ್ಲಿ ನಡೆದ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಿರಲಿಲ್ಲ.

ಉದ್ಧವ್ ಠಾಕ್ರೆ ಅವರು ಚಳಿಗಾಲದ ವಿಧಾನಸಭಾ ಅಧಿವೇಶನಕ್ಕೂ ಗೈರು ಆಗುತ್ತಾರೆಯೇ? ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪವಾರ್, ಠಾಕ್ರೆ ಅವರು ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಈ ವರ್ಷದ ಜೂನ್‌ನಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸುವ ನಿರ್ಧಾರ ಪ್ರಕಟಿಸಿದ ನಂತರ ಉದ್ಧವ್ ಠಾಕ್ರೆ ಅವರು ತಮ್ಮ ಮೇಲ್ಮನೆ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಆದರೆ ನಂತರ ರಾಜೀನಾಮೆ ನೀಡಲಿಲ್ಲ.

ಪಕ್ಷದ ನಾಯಕತ್ವದ ವಿರುದ್ಧ ಶಿವಸೇನಾ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿ ಹಲವು ಶಾಸಕರ ಬಂಡಾಯದಿಂದಾಗಿ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿತ್ತು.

SCROLL FOR NEXT