ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ: ಕೇಂದ್ರ
6 ಮತ್ತು 7ನೇ ತರಗತಿಯ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಶ್ರೀಮದ್ ಭಗವದ್ಗೀತೆಯ ಉಲ್ಲೇಖಗಳನ್ನು ಹಾಗೂ 11 ಮತ್ತು 12ನೇ ತರಗತಿಯ ಸಂಸ್ಕೃತ ಪಠ್ಯಪುಸ್ತಕಗಳು ಭಗವದ್ಗೀತೆಯ ಶ್ಲೋಕಗಳನ್ನು ಒಳಗೊಂಡಿವೆ ಎಂದು ಕೇಂದ್ರ ಸರ್ಕಾರ...
ನವದೆಹಲಿ: 6 ಮತ್ತು 7ನೇ ತರಗತಿಯ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಶ್ರೀಮದ್ ಭಗವದ್ಗೀತೆಯ ಉಲ್ಲೇಖಗಳನ್ನು ಹಾಗೂ 11 ಮತ್ತು 12ನೇ ತರಗತಿಯ ಸಂಸ್ಕೃತ ಪಠ್ಯಪುಸ್ತಕಗಳು ಭಗವದ್ಗೀತೆಯ ಶ್ಲೋಕಗಳನ್ನು ಒಳಗೊಂಡಿವೆ ಎಂದು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಗೆ ತಿಳಿಸಿದೆ.
ಲೋಕಸಭೆಗೆ ಲಿಖಿತ ಉತ್ತರ ನೀಡಿದ ಶಿಕ್ಷಣ ಖಾತೆ ರಾಜ್ಯ ಸಚಿವೆ ಅನ್ನಪೂರ್ಣ ದೇವಿ, ಸಚಿವಾಲಯವು 2020 ರಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯಲ್ಲಿ(ಎಐಸಿಟಿಇ) ಭಾರತೀಯ ಜ್ಞಾನ ವ್ಯವಸ್ಥೆ(ಐಕೆಎಸ್) ವಿಭಾಗವನ್ನು ಸ್ಥಾಪಿಸಿದ್ದು, ಶಿಸ್ತನ್ನು ಉತ್ತೇಜಿಸುವ ದೃಷ್ಟಿಕೊನ ಹೊಂದಿದೆ ಎಂದಿದ್ದಾರೆ.
ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್(ಎನ್‌ಸಿಇಆರ್‌ಟಿ) ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟಿನ ಪುನರ್ ರಚನೆಯನ್ನು ಪ್ರಾರಂಭಿಸಿದೆ ಮತ್ತು ಈ ಸಂಬಂಧ ವಿವಿಧ ಸಚಿವಾಲಯಗಳು, ಇಲಾಖೆಗಳು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ವಿವಿಧ ತಜ್ಞರ ಸಲಹೆಗಳನ್ನು ಕೇಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ(NEP) 2022 ಪ್ಯಾರಾ 4.27 ಭಾರತದ ಸಾಂಪ್ರದಾಯಿಕ ಜ್ಞಾನವನ್ನು ಉಲ್ಲೇಖಿಸುತ್ತದೆ ಎಂದು ಅನ್ನಪೂರ್ಣ ದೇವಿ ಅವರು ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.